ಚೆನ್ನೈನ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

‌ತಮಿಳುನಾಡಿನ ಚೆನ್ನೈನಲ್ಲಿರುವ ಶ್ರೀನಿವಾಸ ಸಾಲಿಡ್ ವೇಸ್ಟ್ ಮ್ಯಾನೇಜ್ ಮೆಂಟ್ ಘಟಕಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್‌ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಘನ ತ್ಯಾಜ್ಯ ನಿರ್ವಹಣೆ ಸೇರಿದಂತೆ ಕಸದಿಂದ ಗ್ಯಾಸ್ ಉತ್ಪಾದನೆಯ ಬಗ್ಗೆ ತಿಳಿದುಕೊಳ್ಳಲು 15 ಮಂದಿ ಅಧಿಕಾರಿಗಳ ಜೊತೆ ಕಸ ನಿರ್ವಹಣೆಯಲ್ಲಿ ಚೆನ್ನೈ ಮಾದರಿಯ ಅಧ್ಯಯನಕ್ಕೆ ಬಂದಿದ್ದೇನೆ” ಎಂದರು.

“ಇಲ್ಲಿನ ತ್ಯಾಜ್ಯ ನಿರ್ವಹಣೆಯಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಂತಾಯಿತು. ಕಳೆದ ಒಂದು ವರ್ಷದಿಂದ ಭೇಟಿ ನೀಡಬೇಕು ಎಂದುಕೊಂಡಿದ್ದೆ. ಈಗ ಸಮಯ ಸಿಕ್ಕ ಕಾರಣಕ್ಕೆ ಭೇಟಿ ನೀಡಿದ್ದೇನೆ. ನಮ್ಮ ರಾಜ್ಯದಲ್ಲೂ ಒಂದಷ್ಟು ಇಲ್ಲಿನ ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳಲಾಗುವುದು” ಎಂದು ಹೇಳಿದರು.

Advertisements

“ಅನೇಕ ಕಡೆ ಘನ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಯಶಸ್ಸು ಕಂಡಿಲ್ಲ. ನಮ್ಮಲ್ಲಿಯೂ 10 ಕಡೆ ಕಸದಿಂದ ವಿದ್ಯುತ್ ಉತ್ಪಾದನೆಗೆ ಅವಕಾಶ ನೀಡಲಾಗಿತ್ತು. ಈ ಹಿಂದೆ ಹೈದರಾಬಾದ್ ಗೆ ಭೇಟಿ ನೀಡಿದ್ದೆ. ಇಲ್ಲಿ ನಗರದ ನಡುವೆಯೇ ಸಿಎನ್ ಜಿ ಉತ್ಪಾದನಾ ಘಟಕವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ನಮ್ಮಲ್ಲೂ ಒಂದಷ್ಟು ಒಳ್ಳೆ ಕೆಲಸ ಮಾಡಿದ್ದೇವೆ. ಇಲ್ಲಿ ಅಚ್ಚುಕಟ್ಟಾಗಿ ಕೆಲಸ ಮಾಡಿದ್ದಾರೆ” ಎಂದು ತಿಳಿಸಿದರು.

“ಈ ವರ್ಷ ವರುಣದೇವ ನಮ್ಮನ್ನು ಕಾಪಾಡಿದ್ದಾನೆ. ಮೇಕೆದಾಟು ಯೋಜನೆ ಸಾಕಾರಗೊಂಡರೆ ಕರ್ನಾಟಕಕ್ಕಿಂತ ತಮಿಳುನಾಡಿನ ಜನತೆಗೆ ಹೆಚ್ಚು ಉಪಯೋಗ. ಈಗ ಇದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಕಾನೂನಾತ್ಮಕವಾಗಿ ನಿವೇಶನ ಹಂಚಿಕೆ

ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಕೆಐಡಿಬಿ ಸಿಎ ನಿವೇಶನ ಹಂಚಿಕೆಯಲ್ಲಾಗಿರುವ ಅಕ್ರಮದ ಬಗ್ಗೆ ಪ್ರಶ್ನಿಸಿದ್ದಾರೆ ಎಂದಾಗ, “ಸಿಎ ನಿವೇಶನ ಹಂಚಿಕೆ ಕಾನೂನಾತ್ಮಕವಾಗಿ ನಡೆದಿದೆ. ಇದರಲ್ಲಿ ಯಾವುದೇ ಅಕ್ರಮವಾಗಿಲ್ಲ. ವ್ಯಕ್ತಿಗೆ ಸೈಟು ಹಂಚಿಲ್ಲ, ಚಾರಿಟಬಲ್ ಟ್ರಸ್ಟಿಗೆ ಹಂಚಿದ್ದೇವೆ” ಎಂದರು.

ತಮಿಳುನಾಡು ಸಿಎಂ ವಿದೇಶಪ್ರಯಾಣದಲ್ಲಿದ್ದಾರೆ. ತಮಿಳುನಾಡು ಡಿಸಿಎಂ ಅವರನ್ನು ಭೇಟಿ ಮಾಡುವಿರಾ ಎಂದಾಗ, “ತಮಿಳುನಾಡು ಡಿಸಿಎಂ ಅವರು ಉತ್ತಮ ಸ್ನೇಹಿತರು ಹಾಗೂ ನಮ್ಮ ನಾಯಕರು. ಸಮಯ ಮಾಡಿಕೊಂಡು ಸ್ನೇಹಪೂರ್ವಕವಾಗಿ ಅವರನ್ನು ಭೇಟಿ ಮಾಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X