ರಾಮನಗರ | ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಹೋರಾಟಗಾರರ ಒತ್ತಾಯ

Date:

Advertisements

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಒತ್ತಾಯಿಸಿ ಹೋರಾಟಗಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

“ಇತ್ತೀಚೆಗಷ್ಟೇ ಕನಕಪುರ ತಾಲೂಕು ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಕಚೇರಿಯನ್ನು ತೆರವುಗೊಳಿಸಿ, ಗ್ಯಾರಂಟಿ ಯೋಜನೆ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರಿಗೆ ನೀಡಿದ್ದು, ಅದನ್ನು ಲಕ್ಷಾಂತರ ರೂಪಾಯಿ ಖರ್ಚಿನಲ್ಲಿ ನವೀಕರಿಸಿಕೊಟ್ಟಿದ್ದಾರೆ. ಇದೇ ಮಾನದಂಡಗಳ ಆಧಾರದಲ್ಲಿ ನಮಗೂ ತಾಲೂಕು ಆಡಳಿತ ಭವನದಲ್ಲಿ ಕಚೇರಿ ಕೊಡಿ” ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಸೋಮವಾರದಂದು ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಹಾಗೂ ಇತತರ ಸಂಘಟನೆಗಳು ತಮ್ಮ ಕಾರ್ಯಚಟುವಟಿಕೆಗಳಿಗಾಗಿ ತಲಾ ಒಂದೊಂದು ಕೊಠಡಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ.

Advertisements

ಈ ಸಂಘಟನೆಗಳು ಪ್ರತಿದಿನ ನೂರಾರು ಸಾರ್ವಜನಿಕರಿಗೆ ಕಾನೂನಾತ್ಮಕ ಸಹಾಯ ಮಾಡುತ್ತಿವೆ. ನ್ಯಾಯ ನೀಡಲು ಶ್ರಮಿಸುತ್ತಿವೆ. ಈ ಮೂಲಕ ತಮ್ಮ ಸೇವೆಯನ್ನು ಮತ್ತಷ್ಟು ಬಲಪಡಿಸಲು ತಮಗೂ ಕೊಠಡಿ ನೀಡಬೇಕೆಂದು ವಿನಂತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ವೇತನ ಪಾವತಿಸುವಂತೆ ಆಗ್ರಹ; ಟಾಸ್ಕ್ ವರ್ಕ್ ದಿನಗೂಲಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

“ಈ ಕೊಠಡಿಗಳನ್ನು ನವೀಕರಿಸಲು ಸರ್ಕಾರದ ಯಾವುದೇ ತೆರಿಗೆ ಹಣವನ್ನು ಬಳಸಬೇಡಿ, ಬದಲಿಗೆ ಸಂಘಟನೆಗಳು ತಮ್ಮ ಸ್ವಂತ ಖರ್ಚಿನಲ್ಲಿ ನವೀಕರಣ ಕಾರ್ಯವನ್ನು ಕೈಗೊಳ್ಳುತ್ತೇವೆ” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ, ಕೆಆರ್‌ಎಸ್ ಪಾರ್ಟಿ ಪ್ರಶಾಂತ್ ಹೊಸದುರ್ಗ, ಸಂಚಾಲಕ ಮುನಿರಾಜು, ಕನ್ನಡ ಭಾಸ್ಕರ್, ರಮೇಶ್, ಗಿರೀಶ್, ಸುರೇಶ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಜಯ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X