ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಹೃದಯಾಘಾತದಿಂದ ಇಕ್ಬಾಲ್ (47) ಎಂಬವರು ಮೃತಪಟ್ಟಿದ್ದಾರೆ.
ಮಂಗಳವಾರ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಇಕ್ಬಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಸಹೋದ್ಯೋಗಿ ರಿಕ್ಷಾ ಚಾಲಕರು ಅತ್ತಾವರದ ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಸಾಗಿಸಿದರು. ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.
ಮೃತರು ಬಜಾಲ್ ವಿದ್ಯಾ ನಗರದ ನಿವಾಸಿಯಾಗಿದ್ದು, ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅವರು ಪತ್ನಿ ಮತ್ತು ಮೂವರು ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ದುಬಾರಿ ಬೆಲೆಯ ಸೀರೆ ಕಳ್ಳತನ: ನಾಲ್ವರು ಮಹಿಳೆಯರ ಬಂಧನ; ₹17.5 ಲಕ್ಷ ಮೌಲ್ಯದ ರೇಷ್ಮೆ ಸೀರೆ ವಶ
ಸಂತಾಪ : ನಗರದ ಸೆಂಟ್ರಲ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿದ್ದು ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ಮೃತ ಹೊಂದಿದ ಇಕ್ಬಾಲ್ ಕಣ್ಣೂರು ಅವರ ಪರಲೋಕ ಜೀವನವನ್ನು ದೇವರು ಸುಖಗೊಳಿಸಿ ಅನುಗ್ರಹಿಸಲಿ, ಅವರ ಅಗಲುವಿಕೆಯಿಂದ ಕುಟುಂಬಕ್ಕೂ ಬಂದು ಬಳಗಕ್ಕೂ ನೋವನ್ನು ಸಹಿಸುವ ಶಕ್ತಿಯನ್ನು ದೇವರುನು ನೀಡಲಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ಅಧ್ಯಕ್ಷ ಇಲ್ಯಾಸ್ ಬೆಂಗರೆ ಸಂತಾಪ ವ್ಯಕ್ತಪಡಿಸಿದ್ದಾರೆ.
