ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಬುಧವಾರ (ಸೆ.4) ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.

“ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

Advertisements

ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು” ಎಂದು ಮನವಿ ಮಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹುದ್ದೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಟತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹ್ಮದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X