ತುಮಕೂರು ಜಿಲ್ಲೆಗೆ 2025ಕ್ಕೆ ಹರಿಯಲಿದೆ ಎತ್ತಿನಹೊಳೆ ನೀರು : ಗೃಹ ಸಚಿವ ಪರಮೇಶ್ವರ್

Date:

Advertisements

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು.

WhatsApp Image 2024 09 04 at 9.22.17 PM 1

ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು.

Advertisements

ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ ಸ್ಥಿತಿ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ. ಇದೆಲ್ಲವು ಕ್ರೂಡಿಕ್ರುತವಾಗಿ ಒಂದುಕಡೆ ಬಂದರೆ 24 ಟಿಎಂಸಿ ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹ 12,912.36 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹ 23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 150 ಕಿ.ಮೀ.ಕೆನಾಲ್:
ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್‌ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X