ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಉಪನ್ಯಾಸಕರ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು ಎಂದು ಮೇಯರ್ ರಾಮಪ್ಪ ಬಡಿಗೇರ ಹೇಳಿದರು.
ಧಾರವಾಡ ನಗರ ಕೇಂದ್ರ ಗ್ರಂಥಾಲಯ ಸಭಾಗಂಣದಲ್ಲಿ ಸೆಪ್ಟೆಂಬರ್ 3ರಂದು ಗ್ರಂಥಾಲಯ ವಿಜ್ಞಾನ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
“ನನ್ನ ಬಾಲ್ಯದಲ್ಲಿ ಗ್ರಂಥಾಲಯದ ಜತೆಗೆ ಹೆಚ್ಚು ಒಡನಾಟ ಹೊಂದ್ದಿದ್ದು, ಹಲವಾರು ಬಾರಿ ಗ್ರಂಥಾಲಯಕ್ಕೆ ಭೇಟಿ ನೀಡಿದ್ದೇನೆ. ಪ್ರತಿಯೊಬ್ಬರೂ ಗ್ರಂಥಾಲಯದ ಸದುಪಯೋಗ ಪಡೆಯಬೇಕು ಮತ್ತು ಈ ಆಧುನಿಕ ಯುಗದಲ್ಲಿ ಗ್ರಂಥಾಲಯ ಶಿಕ್ಷಣ ಅವಶ್ಯಕವಾಗಿದೆ. ತರಬೇತಿಗೆ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳು, ಉಪನ್ಯಾಸಕರ ಪಾಠವನ್ನು ಗಮನದಲ್ಲಿಟ್ಟುಕೊಂಡು ಗ್ರಂಥಾಲಯ ವಿಜ್ಞಾನ ಕುರಿತು ಜ್ಞಾನಾರ್ಜನೆ ಮಾಡಿಕೊಳ್ಳಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಬಸವಕಲ್ಯಾಣ | ಯುವತಿಯ ಕೊಲೆ ಪ್ರಕರಣ; ಸಂತ್ರಸ್ತ ಕುಟುಂಬಕ್ಕೆ ಸಚಿವ ಈಶ್ವರ್ ಖಂಡ್ರೆ ಸಾಂತ್ವನ
ನಗರ ಕೇಂದ್ರ ಗ್ರಂಥಾಲಯ ಉಪ ನಿರ್ದೇಶಕ ರಾಮಯ್ಯ, ತರಬೇತಿ ಕೇಂದ್ರ ಉಪನ್ಯಾಸಕ ಪ್ರೊ. ಎಸ್ ಎಲ್ ಸಂಗಮ, ಎಚ್ ಎಸ್ ಗಡ್ಡಿ, ಎಸ್ ವಿ ಹಿರೇಮಠ, ಮಲ್ಲಿಕಾರ್ಜುನ ಮೂಲಿಮನಿ, ವೀಣಾ ಕುಲಕರ್ಣಿ, ಗ್ರಂಥಾಲಯ ಸಿಬ್ಬಂದಿಗಳು ಹಾಗೂ ತರಬೇತಿ ವಿದ್ಯಾರ್ಥಿಗಳು ಇದ್ದರು.