ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ತೀರ್ಪು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
ಪ್ರಕರಣದ ವಿಚಾರಣೆ ವೇಳೆ “ಕಳೆದ ಎರಡು ವರ್ಷಗಳಲ್ಲಿ ಸಿಬಿಐ ನನ್ನನ್ನು ಬಂಧಿಸಲಿಲ್ಲ. ಆದರೆ, ಇಡಿ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕವೇ ನನ್ನನ್ನು ಬಂಧಿಸಿದೆ” ಎಂದು ಕೇಜ್ರಿವಾಲ್ ಪರ ವಕೀಲ ಅಭಿಷೇಜ್ ಮನು ಸಿಂಘ್ವಿ ವಾದಿಸಿದ್ದಾರೆ.
ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ ಬಂಧಿಸಿದೆ. ಅದಾದ ಬಳಿಕ ಚುನಾವಣೆ ವೇಳೆ ಮಧ್ಯಂತರ ಜಾಮೀನು ನೀಡಿದ ಕೋರ್ಟ್ ಕೇಜ್ರಿವಾಲ್ ಮತ್ತೆ ಜೂನ್ 2ರಂದು ಶರಣಾಗುವಂತೆ ಕೋರ್ಟ್ ತಿಳಿಸಿತ್ತು.
ಈಗಾಗಲೇ ಸಿಬಿಐ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಜಾಗೊಂಡಿದೆ. ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ತಿಳಿಸಿದೆ.
ಅದಾದ ಬಳಿಕ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಅದಾದ ಬಳಿಕ ಮತ್ತೆ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದೆ. ಈ ವಿಚಾರಣೆಯ ತೀರ್ಪು ಮುಂದಿನ ಮಂಗಳವಾರ ಪ್ರಕಟವಾಗಲಿದೆ.
#BREAKING Supreme Court reserves judgment on Arvind Kejriwal’s bail plea in the CBI case. https://t.co/Nt1TqHgjBR
— Live Law (@LiveLawIndia) September 5, 2024
