ಬಿಜೆಪಿಯ ಹಳೆ ಹಗರಣ ಮುನ್ನೆಲೆಗೆ | ‘ಭಾಗ್ಯಲಕ್ಷ್ಮಿ ಯೋಜನೆʼಯ ಅಕ್ರಮವನ್ನು ಎಸ್‌ಐಟಿಗೆ ಕೊಡಲು ಸಿಎಂಗೆ ರಮೇಶ್‌ ಬಾಬು ಪತ್ರ

Date:

Advertisements

ರಾಜ್ಯ ಸರ್ಕಾರದ ‘ಭಾಗ್ಯಲಕ್ಷ್ಮಿ ಯೋಜನೆ’ಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಸಂಬಂಧ ನಡೆದಿದೆ ಎನ್ನಲಾದ ಸುಮಾರು 23 ಕೋಟಿ ರೂ. ಅವ್ಯವಹಾರವನ್ನು ಎಸ್‌ಐಟಿ ತನಿಖೆಗೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿದೆ” ಎಂದು ದೂರಿದ್ದಾರೆ.

“ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಆ ಸೀರೆಗಳನ್ನು ಕೊಳ್ಳಲಾಗಿದೆ. ಈ ವಹಿವಾಟಿನಲ್ಲಿ ಅಂದಿನ ಬಿಜೆಪಿಯ ವಿಧಾನ ಪರಿಷತ್ತಿನ ಸದಸ್ಯರು ಈಗಿನ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಅವರು ಭಾಗಿಯಾಗಿರುವ ಆರೋಪವಿದೆ” ಎಂದು ತಿಳಿಸಿದ್ದಾರೆ.

Advertisements

“ಮಾರುಕಟ್ಟೆಯಲ್ಲಿ ಒಂದು ನೂರು ರೂಪಾಯಿಗಳಿಗೆ ದೊರೆಯಬಹುದಾದ ಸೀರೆಗಳನ್ನು ಹೆಚ್ಚಿನ ದರ ನಮೂದಿಸಿ ರಾಜ್ಯದ ಹೊರಭಾಗದಿಂದ ಅಂದಿನ ಬಿಜೆಪಿ ಸರ್ಕಾರ ಕೊಂಡಿರುತ್ತದೆ. ಈ ಸಂಬಂಧ ಮಾರ್ಚ್ 2011 ರಲ್ಲಿ ಕಾಂಗ್ರೆಸ್ ಪಕ್ಷ ಅಂದಿನ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಸದಸ್ಯರಾದ ಆರ್.ವಿ.ವೆಂಕಟೇಶ್, ದಯಾನಂದ್ ಮುಂತಾದವರು ಚರ್ಚೆ ಮಾಡಿ ಹಗರಣದ ತನಿಖೆಗೆ ಒತ್ತಾಯ ಮಾಡಿದ್ದರು” ಎಂದು ವಿವರಿಸಿದ್ದಾರೆ.

“ಸದರಿ 23 ಕೋಟಿ ರೂಪಾಯಿಗಳ ಹಗರಣದಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರವಾಗಿದ್ದು, ಇದರ ತನಿಖೆ ಆಗಬೇಕು. ಭಾಗ್ಯಲಕ್ಷ್ಮಿ ಸೀರೆ ವಿತರಣೆಗೆ ಗುಜರಾತಿನ ಸೂರತ್ ನಿಂದ ಸೀರೆಗಳನ್ನು ಹೆಚ್ಚು ಹಣ ನೀಡಿ ಪಡೆಯುವ ಮೂಲಕ ದೊಡ್ಡ ಮಟ್ಟದ ಭ್ರಷ್ಟಾಚಾರ ಎಸಗಿ ರಾಜ್ಯ ಸರ್ಕಾರಕ್ಕೆ ನಷ್ಟವನ್ನು ಉಂಟು ಮಾಡಿರುತ್ತಾರೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಮತ್ತು ಎಷ್ಟು ಸಾರ್ವಜನಿಕ ಹಣ ಲೂಟಿ ಆಗಿದೆ ಎಂಬುವ ಕುರಿತು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡದ ಮೂಲಕ ತನಿಖೆ ಮಾಡುವ ಅವಶ್ಯಕತೆ ಇರುತ್ತದೆ” ಎಂದು ರಮೇಶ್‌ ಬಾಬು ಕೋರಿದ್ದಾರೆ.

“ಕರ್ನಾಟಕದಲ್ಲಿ ಸೀರೆಗಳ ಪೂರೈಕೆಗೆ ವಿಸ್ತಾರವಾದ ಅವಕಾಶವಿದ್ದು, ನಮ್ಮ ರಾಜ್ಯದಲ್ಲೇ ಸೀರೆಗಳನ್ನು ಕ್ರಯಕ್ಕೆ ಪಡೆದುಕೊಂಡಿದ್ದರೆ ಇಲ್ಲಿನ ನೇಕಾರರಿಗೆ ಮತ್ತು ಕೈ ಮಗ್ಗದ ಸಹಕಾರ ಸಂಘಗಳಿಗೆ ಆರ್ಥಿಕವಾಗಿ ಶಕ್ತಿ ಬರುತ್ತಿತ್ತು. ಹೊರ ರಾಜ್ಯದಿಂದ ಸೀರೆಗಳನ್ನು ಹೆಚ್ಚು ದರಕ್ಕೆ ಪಡೆಯುವುದರ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗೆ ವಿಶೇಷವಾಗಿ ಇಲ್ಲಿನ ನೇಕಾರರಿಗೆ ಮೋಸ ಎಸಗಲಾಗಿದೆ. ಆದುದರಿಂದ ರಾಜ್ಯದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಭಾಗ್ಯಲಕ್ಷ್ಮಿ ಯೋಜನೆಯ 2011 ರ ಬಿಜೆಪಿ ಸರ್ಕಾರದ 23 ಕೋಟಿ ರೂಪಾಯಿಗಳ ಸೀರೆ ಹಗರಣವನ್ನು ವಿಶೇಷ ತನಿಖಾ ತಂಡದ ಮೂಲಕ ತನಿಖೆಗೆ ಒಳಪಡಿಸಬೇಕು” ಎಂದು ಪತ್ರ ಮೂಲಕ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X