ಬೀದರ್ | ಸೆ.1ರಿಂದ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ರಾಷ್ಟ್ರವ್ಯಾಪಿ ಅಭಿಯಾನ

Date:

Advertisements

ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆಯಿಂದ ‘ನೈತಿಕತೆಯೇ ಸ್ವಾತಂತ್ರ್ಯದ ಭರವಸೆ’ ಎಂಬ ವಿಚಾರ ಕುರಿತು ರಾಷ್ಟ್ರವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಮಹಿಳಾ ವಿಭಾಗದ ರಾಜ್ಯ ಕಾರ್ಯದರ್ಶಿ ತಸ್ಕಿಲಾ ಖಾನಮ್ ತಿಳಿಸಿದರು.

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ‘ಇಂದು ಎಲ್ಲ ಧರ್ಮಗಳಲ್ಲಿ ಸ್ತ್ರೀಯರಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿದರೂ ಅದನ್ನು ಹೆಚ್ಚಾಗಿ ದುರ್ಬಳಕೆ ಮಾಡಿಕೊಳ್ಳುವ ಕಾರ್ಯ ನಡೆಯುತ್ತಿದೆ. ಇದರಿಂದ ಮಾನವೀಯ ಮೌಲ್ಯಗಳು ಹಾಗೂ ನೈತಿಕ ಮೌಲ್ಯಗಳು ಕುಸಿಯುತ್ತಿದ್ದು, ಸಂಸ್ಕೃತಿ, ಪರಂಪರೆ ಗೌಣವಾಗುತ್ತಿದೆ’ ಎಂದು ಪ್ರತಿಪಾದಿಸಿದರು.

‘ದೇಶ ಸ್ವಾತಂತ್ರ್ಯಗೊಂಡು 78 ವರ್ಷಗಳು ಗತಿಸಿದರೂ ಸ್ವಾತಂತ್ರ್ಯದ ನಿಜವಾದ ಪರಿಕಲ್ಪನೆ ಅರಿಯಲು ವಿಫಲರಾಗಿದ್ದೇವೆ. ಪಾಶ್ಚಿಮಾತ್ಯ ರಾಷ್ಟ್ರಗಳ ಅನುಸರಣೆಗೆ ಒಳಗಾಗಿ ನಮ್ಮ ಜೀವನ ವಿಧಾನವನ್ನೇ ಮರೆತಿದ್ದೇವೆ. ಇದರಿಂದ ಸಮಾಜದಲ್ಲಿ ಅತ್ಯಾಚಾರ, ಕೊಲೆ, ಶೋಷಣೆ, ವಂಚನೆ, ವ್ಯಭಿಚಾರದಂತಹ ಹೇಯ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

Advertisements

‘ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ಈ ಅಭಿಯಾನದ ಮೂಲಕ ಮಾನವ ಜೀವನದ ಸುಭಿಕ್ಷೆ ಮತ್ತು ಮನೋಹರತೆ, ನೈತಿಕ ಕಟ್ಟಳೆಗಳನ್ನು ಪಾಲಿಸುವುದರಿಂದಲೇ ಸಾಧ್ಯ ಎಂಬ ಪ್ರಜ್ಞೆ ಬೆಳೆಸುವ ಸಂಕಲ್ಪ ತೊಟ್ಟಿದೆ. ಯುವ ಪೀಳಿಗೆಯನ್ನು ಸ್ವಾತಂತ್ರ‍್ಯದ ತಪ್ಪು ಕಲ್ಪನೆಯಿಂದ ಜಾಗೃತರಾಗಿಸುವುದು,‌‌ ಅದನ್ನು ರಕ್ಷಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ’ ಎಂದರು.

‘ಅಭಿಯಾನದಲ್ಲಿ ಅಂತರ್ ಧರ್ಮಿಯ ವಿಚಾರಗೋಷ್ಟಿ, ಮಹಿಳಾ ಸಮಾವೇಶ, ಶಾಲಾ-ಕಾಲೇಜುಗಳಲ್ಲಿ ಉಪನ್ಯಾಸ, ವೈಯಕ್ತಿಕ ಭೇಟಿ, ಸಮಾಜದ ಪ್ರಸಿದ್ಧ ವ್ಯಕ್ತಿಗಳ ಸಂದರ್ಶನ ನಡೆಸುವುದು, ಅದರ ಪ್ರಮುಖ ಅಂಶಗಳನ್ನು ಆಯ್ದು ಸಾಮಾಜಿಕ ಮಾಧ್ಯಮದ ಮೂಲಕ ಪ್ರಚಾರ ಮಾಡುವುದು. ಲೇಖನ, ಭಾಷಣ ಸ್ಪರ್ಧೆ, ಪೋಸ್ಟರ್ ಡಿಸೈನಿಂಗ್ ಹೀಗೆ ಮುಂತಾದ ಸ್ಪರ್ಧೆಗಳನ್ನು ನಡೆಸಲಾಗುವುದು. ಸಮುದಾಯದ ಯುವತಿಯರಲ್ಲಿ ಇದರ ಅಧ್ಯಯನ ಮತ್ತು ಅದರ ಬಗ್ಗೆ ರಸಪ್ರಶ್ನೆ ಸ್ಪರ್ಧೆ ನಡೆಸಲಾಗುವುದು’ ಮಾಹಿತಿ ನೀಡಿದರು.

ಶಾಹಿನ್ ಕಾಲೇಜಿನ ಪ್ರಾಚಾರ್ಯೆ ಅಫ್ರನಾಜ್ ಮಾತನಾಡಿ, ‘ನಾವು ದೇಶದಾದ್ಯಂತ 78ನೇ ಸ್ವಾತಂತ್ರೋತ್ಸವವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದೇವೆ. ಆದರೆ ದೇಶದ ಜನತೆಗೆ ನಿಜವಾದ ಸ್ವಾತಂತ್ರ‍್ಯ, ಸಾಮಾಜಿಕ ಸ್ಥಿತಿ ದಕ್ಕಿದೆಯೇ ಮತ್ತು ಸಮೂಹದಲ್ಲಿ ಎಷ್ಟರ ಮಟ್ಟಿಗೆ ಸ್ವಾ ತಂತ್ರ‍್ಯದ ಕಲ್ಪನೆಯು ಕಾಣಸಿಗುತ್ತದೆ ಎಂಬುದರ ಕುರಿತು ಆಲೋಚಿಸಬೇಕಾದ ಅಗತ್ಯವಿದೆ’ ಎಂದರು.

‘ಯುವ ಸಮೂಹವನ್ನು ಜಾಗೃತಿ ಮೂಡಿಸುವ ಮತ್ತು ಪ್ರಸಕ್ತ ಸ್ಥಿತಿಯಲ್ಲಿ ಸುಧಾರಣೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗವು ದೇಶದಾದ್ಯಂತ ಒಂದು ತಿಂಗಳ ಅಭಿಯಾನ ಆಯೋಜಿಸುವ ತೀರ್ಮಾನ ಕೈಗೊಂಡಿದೆ’ ಹೇಳಿದರು.

ಜಿಲ್ಲಾ ಸಂಚಾಲಕಿ ತೌಹಿದ್ ಶಿಂಧೆ ಮಾತನಾಡಿ, ‘ಈ ಅಭಿಯಾನದಡಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದರಲ್ಲಿ ಮುಖ್ಯವಾಗಿ ಉದ್ಘಾಟನಾ ಕಾರ್ಯಕ್ರಮ, ಪತ್ರಿಕಾಗೋಷ್ಠಿ, ಮಹಿಳೆಯರೊಂದಿಗೆ ಭೇಟಿ, ಸಾಮಾಜಿಕ ಕಾರ್ಯಕರ್ತರ ಭೇಟಿ, ಮೊಹಲ್ಲಾಗಳಲ್ಲಿ ಟೀ ಪಾರ್ಟಿ, ಪದವಿ ಕಾಲೇಜು, ಬ್ರಿಮ್ಸ್, ಆಲ್ ಅಮೀನ್, ಶಾಹೀನ್, ಅಕ್ಕ ಮಹಾದೇವಿ ಮತ್ತು ನರ್ಸೀಂಗ್ ಕಾಲೇಜುಗಳಲ್ಲಿ ಚರ್ಚಾಗೋಷ್ಠಿ, ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಭೇಟಿ, ಕುಟುಂಬ ಸ್ನೇಹ ಮಿಲನ್, ಮಕ್ಕಳಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದರು.

‘ನೈತಿಕ ಮೌಲ್ಯಗಳು ವಿಷಯದ ಮೇಲೆ ಪೋಸ್ಟರ್ ತಯ್ಯಾರಿಸುವ ಸ್ಪರ್ಧೆ, ಭಾಷಣ ಸ್ಪರ್ಧೆ, ಪೆನಲ್ ಚರ್ಚೆ, ಮುಹಮ್ಮದ್ ಅತ್ಯುನ್ನತ ಚಾರಿತ್ರ‍್ಯವಂತ ವಿಷಯದ ಮೇಲೆ ನಿಬಂಧ ಸ್ಪರ್ಧೆ, ಪ್ರತಿನಿತ್ಯ ಡಿಜಿಟಲ್ ಪೋಸ್ಟರ್ ತಯ್ಯಾರಿಸಿ ಜನರಿಗೆ ಕಳುಹಿಸುವುದು, ಹಳ್ಳಿಗಳಿಗೆ ಭೇಟಿ ಜನಜಾಗೃತಿ ಮೂಡಿಸುವುದು ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.

ಸಂಘಟನೆಯ ನಗರ ಘಟಕದ ಅಧ್ಯಕ್ಷೆ ಸೈಯ್ಯದಾ ಉಮ್ಮ ಹಬೀಬಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

757eb9ea14220778442ec61d0b832f7b?s=150&d=mp&r=g
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X