ಗದಗ | ಭಾರತದಲ್ಲಿ ಸಮಾನತೆ ಸಾರಿದವರ ಬಸವಣ್ಣ, ಅಂಬೇಡ್ಕರ್: ಡಿ ಮಾಳಮ್ಮ

Date:

Advertisements
  • ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಸರಳ ವಿವಾಹ
  • ದೇವದಾಸಿ ಕುಟುಂಬಕ್ಕೆ ಭೂಮಿ‌, ಮನೆ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ

12ನೇ ಶತಮಾನದಲ್ಲಿ ಅಸಮಾನತೆ, ಜಾತಿ ಅಸಮಾನತೆಯನ್ನು ತೊಲಗಿಸಿ ಬಸವಣ್ಣ ಸಮಾನತೆ ಸಾರಿದರೆ, ಡಾ. ಬಿ ಆರ್ ಅಂಬೇಡ್ಕರ್ ಮನುವಾದಿಗಳ ವಿರುದ್ಧ ಹೋರಾಟ ಮಾಡಿದರು ಎಂದು ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ ಮಾಳಮ್ಮ ಹೇಳಿದರು.

ಕರ್ನಾಟಕ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ತಾಲೂಕು ಸಮಿತಿ ಸಹಯೋಗದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ಬಸವ ಜಯಂತಿ ಅಂಗವಾಗಿ ಗದಗ ಜಿಲ್ಲೆಯ ರೋಣ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಸರಳ ಸಾಮೂಹಿಕ ವಿವಾಹ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿ ಡಿ ಮಾಳಮ್ಮ ಮಾತನಾಡಿ, “ಸಮಾಜದಲ್ಲಿ ಜಾತಿವ್ಯವಸ್ಥೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದವರೆಂದರೆ ಬಸವಣ್ಣ ಮತ್ತು ಅಂಬೇಡ್ಕರ್, ಇವರ ಜಯಂತಿ ಪ್ರಯುಕ್ತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಸಮಾಜದಲ್ಲಿ ಸಮಾನತೆ ತರುವಲ್ಲಿ ಈ ಕಾರ್ಯಕ್ರಮ ಮಹತ್ವದ ಕಾರ್ಯ ಶ್ಲಾಘನೀಯ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? :ಸಕಲೇಶಪುರ | ಲಂಚ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೆಆರ್‌ಎಸ್‌ ಗೆಲ್ಲಿಸಿ: ರವಿ ಕೃಷ್ಣಾರೆಡ್ಡಿ

ದಲಿತರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಶೋಷಣೆಗೆ ಒಳಗಾದವರು. ಇಂದಿಗೂ ಇವರಿಗೆ ಊಳಲು ಭೂಮಿ ಇಲ್ಲ. ಸಮಾಜದಲ್ಲಿ ಅಂದಿನಿಂದಲೂ ಈವರೆಗೂ ಒಂದಲ್ಲ ಒಂದು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಷ್ಟೇ ಅಲ್ಲದೇ ದೇವದಾಸಿ ಮಹಿಳೆಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ದೇವದಾಸಿ ಕುಟುಂಬಕ್ಕೆ ಭೂಮಿ‌, ಮನೆ ಹಾಗೂ ಅವರ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಸರ್ಕಾರ ಕೊಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಬಸವಲಿಂಗ ಸ್ವಾಮಿಜಿ, ನವ ಜೋಡಿಗಳಿಗೆ ಬಸವಣ್ಣ ಅವರ ವಚನ ಬೋಧಿಸಿದರು. ಎಂ ಎಸ್‌ ಹಡಪದ ಪ್ರಸ್ತಾವಿಕ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಪೀರು ರಾಠೋಡ್, ಬಾಲು ರಾಠೋಡ್, ಮಾರುತಿ ಚಟಗಿ ಮಹೇಶ ಹಿರೇಮಠ ಹಾಗೂ ಕಾರ್ಮಿಕ ಸಂಘದ ಮುಖಂಡರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X