ಧಾರವಾಡ | ಗ್ಯಾರಂಟಿ ಯೋಜನಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು: ಎಸ್.ಆರ್.ಪಾಟೀಲ್

Date:

Advertisements

ಸರಕಾರ ಅನುಷ್ಠಾನ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.

ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಹಳ್ಳಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಂತಾರಾಜ್ಯ ಬಸ್‍ಗಳನ್ನು ಕಡಿಮೆ ಮಾಡಿ, ಸ್ಥಳೀಯ ಹಾಗೂ ಹಳ್ಳಿಗಳಿಗೆ ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಿ, ಸಮಸ್ಯೆಗಳು ಆಗದಂತೆ ಸರಿಯಾದ ಕ್ರಮ ಕೈಗೊಳ್ಳಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

Advertisements

ಕಲಘಟಗಿ ತಾಲೂಕಿನ ದೇವಿಕೊಪ್ಪ ಹಾಗೂ ನವಲಗುಂದ ತಾಲೂಕಿನಲ್ಲಿ ವಿದ್ಯುತ್ ಹಳೆಯ ಕಂಬಗಳು ಹೆಚ್ಚಾಗಿ ಬಾಗಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಅಧಿಕಾರಿಗಳು ಪರಿಶೀಲಿಸಬೇಕು ಹಾಗೂ ವಿದ್ಯುತ್ ಸರಬರಾಜು ಸರಿಯಾಗಿ ಪೂರೈಸುವಂತೆ ತಿಳಿಸಿದರು.

ಸರಿಯಾದ ಬೋರ್ಡ್ ವ್ಯವಸ್ಥೆ ಇಲ್ಲದಂತಹ ನ್ಯಾಯ ಬೆಲೆ ಅಂಗಡಿ ಗುರುತಿಸಿ, ತಕ್ಷಣವೇ ಬೋರ್ಡ್‍ಗಳನ್ನು ಹಾಕಿಸಬೇಕು. ಕುಂದಗೋಳ ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಆಹಾರ ಮತ್ತು ನಾಗರಿಕ ಸೌಲಭ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2024 09 06 at 10.39.48 AM 1 1

ಹಳ್ಳಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ರೂ. 2,000 ಹಣವು ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲವೆಂದು ದೂರುಗಳು ದಾಖಲಾಗುತ್ತಿದ್ದು, ಅಂತಹ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಮಾಡಿ, ವರದಿಯನ್ನು ನೀಡುವಂತೆ ತಿಳಿಸಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯಶಸ್ವಿಯಾಗಿ ಯೋಜನೆಗಳು ತಲುಪುವಂತೆ ಜಿಲ್ಲೆಯ ಹಾಗೂ ತಾಲೂಕಿನ ಎಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರು ತಾಲೂಕು ಮಟ್ಟದಲ್ಲಿ ಸಭೆಗಳನ್ನು ಜರುಗಿಸಿ, ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಸಿಎಂ ಸಿದ್ದರಾಮಯ್ಯರನ್ನು ‘ಸಿದ್ದ’ ಎಂದು ಉಲ್ಲೇಖಿಸಿದ ಎನ್‌ಡಿಟಿವಿ; ಭವ್ಯಾ ನರಸಿಂಹಮೂರ್ತಿ ತರಾಟೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ವರೂಪ್ ಟಿ.ಕೆ., ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮುರುಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಸುಧೀರ ಬೋಳಾರ ಹಾಗೂ ರತ್ನಾ ತೇಗೂರಮಠ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X