ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿ ಮರು ಪರಿಶೀಲಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಸಚಿವ ಗುಂಡೂರಾವ್

Date:

Advertisements

ಆರೋಗ್ಯ ವಿಮೆಯ ಮೇಲಿನ ಶೇ.18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Advertisements

“ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ. ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ ಎಂದು ಹೇಳಿದ್ದಾರೆ.

“ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು. ಕೇಂದ್ರ ಸರ್ಕಾರವು 2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್ ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ. ಆದರೆ ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವರು ಹೇಳಿದ್ದಾರೆ.‌

2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ. ಪರಿಣಾಮ ಆರೋಗ್ಯ ವಿಮೆಯು ಈಗ ಹೆಚ್ಚು ದುಬಾರಿಯಾಗಿದೆ. ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತದೆ, ಅವರಿಗೆ ಪ್ರೀಮಿಯಂನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯ ವಿಮೆಗಳನ್ನ ಜನರು ತಿರಸ್ಕರಿಸುತ್ತಿದ್ದಾರೆ. ವಿಮಾ ರಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆರೋಗ್ಯ ವಿಚಾರಗಳಲ್ಲಿ ತೆರಿಗೆ ನೀತಿಗಳು ಜನಪರವಾಗಿರಬೇಕು.. ತೆರಿಗೆ ಪ್ರಮಾಣವನ್ನ ಕಡಿತಗೊಳಿಸುವುದರಿಂದ ಹೆಚ್ಚಿನ ಸಂಖ್ಯೆಯ ಜನರು ಆರೋಗ್ಯ ವಿಮೆಯ ರಕ್ಷಣೆ ಪಡೆಯುವಂತೆ ಪ್ರೋತ್ಸಾಹಿಸಬಹುದು. ಇದರಿಂದ ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗಗಳ ಆರ್ಥಿಕ ಸ್ಥಿತಿಯನ್ನು ಕಾಪಾಡಬಹುದಾಗಿದೆ.. 2047 ರ ವೇಳೆಗೆ ಯುನಿವರ್ಸಲ್ ಇನ್ಸೂರೆನ್ಸ್ ಎಂಬ ಆಶಯವನ್ನ ಸಾಧಿಸುವತ್ತ ಧನಾತ್ಮಕ ಹೆಜ್ಜೆ ಇಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X