ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ವಿನೇಶ್ ಫೋಗಟ್ ಸೇರ್ಪಡೆ

Date:

Advertisements

ಕುಸ್ತಿಪಟು ವಿನೇಶ್ ಫೋಗಟ್ ಕೇಂದ್ರ ಸರ್ಕಾರದ ರೈಲ್ವೆ ಉದ್ಯೋಗಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಗುಳಿಯಲು ನಿರ್ಧರಿಸಿದ್ದು, ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಆದರೆ, ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಬಡವರಿಗೆ 10%; ಶ್ರೀಮಂತರಿಗೆ 5% ಬಡ್ಡಿ; ಇದೇ ಮೋದಿ ನ್ಯಾಯ?

ಇತ್ತ ವಿನೇಶ್ ಸ್ಪರ್ಧೆ ಕುರಿತ ಬೆಳವಣಿಗೆಯನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಕಾಂಗ್ರೆಸ್ ಒಂದು ವೇಳೆ ವಿನೇಶ್ ಅವರನ್ನು ಕಣಕ್ಕಿಳಿಸಿದರೆ, ಅವರಿಗೆ ಎದುರಾಳಿಯಾಗಿ ವಿನೇಶ್ ಸಂಬಂಧಿಯೇ ಆಗಿರುವ ಬಬಿತಾ ಫೋಗಟ್ ಅವರನ್ನು ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X