ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣ: ಸಚಿವ ಜಮೀರ್ ಅಹಮದ್ ಖಾನ್

Date:

Advertisements

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದೇ ರೀತಿ ತಾಲೂಕು ಮತ್ತು ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೂ ಚಿಂತನೆ ಇದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.

ವಿಕಾಸಸೌಧ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು, “ವಕ್ಫ್‌ ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ. ವಕ್ಫ್‌ ಆಸ್ತಿ ಸಂರಕ್ಷಣೆ ಕೇವಲ ಸಚಿವ ಅಥವಾ ರಾಜ್ಯಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಜಿಲ್ಲಾಧ್ಯಕ್ಷರು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯೂ ಹೌದು” ಎಂದರು.

“ವಕ್ಫ್‌ ಆಸ್ತಿ ಸರ್ಕಾರ ಕೊಟ್ಟಿದ್ದು, ಅದು ಸರ್ಕಾರಕ್ಕೆ ಸೇರಿದ್ದು ಎಂಬ ಭಾವನೆ ಇದೆ. ಒಂದೇ ಒಂದು ಇಂಚು ಜಾಗ ಕೂಡ ವಕ್ಫ್‌ ಬೋರ್ಡ್ ಸರ್ಕಾರದಿಂದ ಪಡೆದಿಲ್ಲ. ವಕ್ಫ್‌ ಆಸ್ತಿ ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟಿರುವ ದಾನ ಆಗಿದೆ. ಕಬಾರಸ್ಥಾನ ಹೊರತು ಪಡಿಸಿದರೆ ಸರ್ಕಾರದಿಂದ ನಮಗೆ ಬೇರೆ ಯಾವುದೇ ಜಾಗ ಕೊಟ್ಟಿಲ್ಲ” ಎಂದು ಹೇಳಿದರು

Advertisements

“ಜಿಲ್ಲಾ ಮಟ್ಟದಲ್ಲಿ ವಕ್ಫ್‌ ಅದಾಲತ್ ನಡೆಸುತ್ತಿರುವುದರಿಂದ ಹಲವಾರು ಸಮಸ್ಯೆ ಬಗೆಹರಿದಿದ್ದು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನಡೆಸಲಾಗುವುದು” ಎಂದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು ತಮ್ಮ ಜಿಲ್ಲೆಗಳ ಸಮಸ್ಯೆ ಹೇಳಿಕೊಂಡರು. ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣ ಕ್ಕೆ ಜಾಗ ಕೊಡಲು ದಾನಿಗಳು ಸಿದ್ದ ಇರುವ ಬಗ್ಗೆಯೂ ಸಭೆಯ ಗಮನಕ್ಕೆ ತಂದರು.

ಇದೇ ಸಂದರ್ಭದಲ್ಲಿ ಒಂದು ವರ್ಷ ಪೂರೈಸಿದ ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಅವರನ್ನು ಸನ್ಮಾನಿಸಲಾಯಿತು. ಒಂದು ವರ್ಷದ ಸಾಧನೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸದಸ್ಯ ರಾದ ಯಾಕೊಬ್, ಮೌಲನಾ ಶಾಫಿ ಸಾದಿ, ರಿಯಾಜ್, ಅಸೀಫ್, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಸಿ ಇ ಒ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X