ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಾಜಿ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಅವರೊಂದಿಗೆ ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್ ಅವರು ಕಾಂಗ್ರೆಸ್ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್ ಪಕ್ಷವು 31 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ವಿನೇಶ್ ಫೋಗಟ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಕಾಂಗ್ರೆಸ್ ಪಕ್ಷವು ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಸೋನಿಪತ್‌ನಿಂದ ಸುರೇಂದರ್ ಪನ್ವಾರ್, ಗೋಹಾನಾದಿಂದ ಜಗಬೀರ್ ಸಿಂಗ್ ಮಲಿಕ್ ಮತ್ತು ರೋಹ್ಟಕ್‌ನಿಂದ ಭರತ್ ಭೂಷಣ್ ಬಾತ್ರಾ ಅವರಿಗೆ ಟಿಕೆಟ್ ನೀಡಿದೆ.
ಈ ಹಿಂದೆ ಹಿಂಸಾಚಾರ ಉಂಟಾಗಿ ಸುದ್ದಿಯಲ್ಲಿದ್ದ ನೂಹ್ ಕ್ಷೇತ್ರದಿಂದ ಅಫ್ತಾಬ್ ಅಹ್ಮದ್ ಅವರಿಗೆ ಟಿಕೆಟ್ ನೀಡಿದೆ.
ಹರಿಯಾಣ ವಿಧಾನಸಭೆಯ 90 ಕ್ಷೇತ್ರಗಳಿಗೆ ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. 8ರಂದು ಫಲಿತಾಂಶ ಪ್ರಕಟವಾಗಲಿದೆ.
