ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ ಗಾಳಿಯ ಗುಣಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ವಾಯು ಮಾಲಿನ್ಯದ ಕಾರಣದಿಂದಾಗಿ ಈ ಮೂರು ಜಿಲ್ಲೆಗಳಲ್ಲಿ ಗಾಳಿಯು ಅಪಾಯಕಾರಿ ಮಟ್ಟಕ್ಕೆ ತಲುಪಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿಯು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ ಪ್ರಮುಖ 10 ನಗರಗಳ ಗಾಳಿಯು ಮಾಲಿನ್ಯವಾಗಿದೆ. ಈ ಹತ್ತು ನಗರಗಳಲ್ಲಿ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ)ಗಳ ಪ್ರಮಾಣವು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾರ್ಗಸೂಚಿ ನಿಗದಿಪಡಿಸಿದ ಸರಾಸರಿ ಮಟ್ಟಗಳನ್ನು ಮೀರಿದೆ. ಇದನ್ನು ಈಗಲೇ ನಿಯಂತ್ರಿಸದಿದ್ದರೆ ಆ ಗಾಳಿಯನ್ನೇ ಉಸಿರಾಡುವ ಜನರ ಆರೋಗ್ಯಕ್ಕೆ ಅತೀ ಕೆಟ್ಟ ಪರಿಣಾಮ ಬೀರಲಿದೆ ಎಂದು ಗ್ರೀನ್‌ಪೀಸ್ ಇಂಡಿಯಾದ ‘ಸ್ಪೇರ್ ದಿ ಏರ್-2’ ವರದಿ ಹೇಳಿದೆ.
ದಕ್ಷಿಣ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ, ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ಗ್ರೀನ್‌ಪೀಸ್ ಇಂಡಿಯಾ ವಿಶ್ಲೇಷಿಸಿದೆ.
ಇದನ್ನು ಓದಿದ್ದೀರಾ? ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ
ಈ ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂನಲ್ಲಿ ಗಾಳಿಯ ಗುಣಮಟ್ಟ ತೀವ್ರ ಕಲುಷಿತವಾಗಿದೆ. ಇಲ್ಲಿನ ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣ ಡಬ್ಲ್ಯುಎಚ್‌ಒ ಮಾರ್ಗಸೂಚಿ ನಿಗದಿಪಡಿಸಿದ ಮಾನದಂಡಕ್ಕಿಂತ 10 ಪಟ್ಟು ಮತ್ತು ಪಿಎಂ 10 ಕಣಗಳ ಪ್ರಮಾಣ 9 ಪಟ್ಟು ಹೆಚ್ಚಿದೆ.
ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ ಸುಮಾರು 6ರಿಂದ 7 ಪಟ್ಟು ಅಧಿಕವಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.
Report Launch🚨SPARE THE AIR—The 2nd edition of our report #SpareTheAir reveals alarming air pollution trends across South Indian cities. 🌍💨
— Greenpeace India (@greenpeaceindia) September 6, 2024
Read the full report:🔗https://t.co/rJhFPAtIjd#CleanAirForALL #CleanAirNow pic.twitter.com/qNqj2rcM4U
