ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

Date:

Advertisements

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಮುನಿಯಪ್ಪನ ಮೊಬೈಲ್​ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ.

ಕಳೆದ ವರ್ಷ ಕೋಲಾರ ಜಿಲ್ಲೆಯ ವಸತಿ ಶಾಲೆಯೊಂದಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಗುಂಡಿ ಸ್ವಚ್ಛಗೊಳಿಸಿ ವಿವಾದಕ್ಕೀಡಾಗಿದ್ದ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅದೇ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿರುವ ಮುನಿಯಪ್ಪ ಅದೇ ವಸತಿ ಶಾಲೆಯ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಫೋಟೋ ಮತ್ತು ವಿಡಿಯೋಗಳನ್ನು ಗೊತ್ತಿಲ್ಲದಂತೆ ಶೂಟ್‌ ಮಾಡಿ ಇಟ್ಟುಕೊಂಡಿದ್ದಾನೆ ಎನ್ನಲಾಗಿದೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

Advertisements

2023 ಡಿಸೆಂಬರ್ 17ರಂದು ಶಾಲೆಯ ಶೌಚಗುಂಡಿಯನ್ನು ವಿದ್ಯಾರ್ಥಿಗಳು ಸ್ವಚ್ಛಗೊಳಿಸಿದ್ದ ಪ್ರಕರಣ ಬಯಲಿಗೆ ಬಂದಿತ್ತು. ಆಗ ಸರ್ಕಾರ ತನಿಖೆಗೆ ಆದೇಶಿಸಿತ್ತು. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿಗಳು ಶಾಲೆಗೆ ಆಗಮಿಸಿ ತನಿಖೆ ಆರಂಭಿಸಿದ್ದರು. ಆ ಸಂದರ್ಭದಲ್ಲಿ, ಅಲ್ಲಿದ್ದ ಎಲ್ಲ ಶಿಕ್ಷಕರ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆಗ ಮುನಿಯಪ್ಪನವರ ಮೊಬೈಲ್ ಕೂಡ ವಶಕ್ಕೆ ಸಿಕ್ಕಿತ್ತು. ವಶಪಡಿಸಿಕೊಂಡ ಮೊಬೈಲ್‌ಗಳಲ್ಲಿರುವ ದತ್ತಾಂಶಗಳನ್ನು ಪರಿಶೀಲಿಸುವಾಗ ಮುನಿಯಪ್ಪನವರ ಮೊಬೈಲ್‌ನಲ್ಲಿ ಬಾಲಕಿಯರ ನಗ್ನ ಫೋಟೋಗಳು, ಬಟ್ಟೆ ಬದಲಿಸುವಾಗ ತೆಗೆದಿರಬಹುದಾದ ಫೋಟೋಗಳು ಸಿಕ್ಕಿವೆ. ಇಂಥದ್ದೇ ಕೆಲವು ವಿಡಿಯೋಗಳೂ ಕೂಡ ಸಿಕ್ಕಿವೆ.

ಪ್ರಕರಣದ ಗಾಂಭೀರ್ಯತೆ ಅರಿತ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಮುನಿಯಪ್ಪನವರನ್ನು ಬಂಧಿಸಿದ್ದರು. ತಮ್ಮ ಬಂಧನದ ವಿರುದ್ಧ ಕೆಳ ಹಂತದ ನ್ಯಾಯಲಯದ ಮೊರೆ ಹೋಗಿದ್ದ. ಅಲ್ಲಿ ಆತನಿಗೆ ವ್ಯತಿರಿಕ್ತ ತೀರ್ಪು ಬಂದಿತ್ತು. ತನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತ ಶಿಕ್ಷಕ ತನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದ. ಇದೀಗ ಈ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದೆ.

ತನ್ನ ಮೊಬೈಲ್‌ನಲ್ಲಿ ಹೆಣ್ಣು ಮಕ್ಕಳ 5000ಕ್ಕೂ ಹೆಚ್ಚು ನಗ್ನ ವಿಡಿಯೋ, ಫೋಟೋಗಳನ್ನು ಇಟ್ಟುಕೊಂಡಿರುವುದು ಮತ್ತು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಿಕ್ಷಕ ಮುನಿಯಪ್ಪನಿಗೆ ಹೈಕೋರ್ಟ್‌ ಈ ಮೂಲಕ ಚಾಟಿ ಬೀಸಿದೆ.

“ಬಾಲಕಿಯರ ಅಂಗಾಂಗಗಳ ಫೋಟೋ ಅಥವಾ ವಿಡಿಯೋಗಳನ್ನು ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳಲ್ಲಿ ಸಂಗ್ರಹಿಸಿಟ್ಟುಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧ. ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿರುವ ಮುನಿಯಪ್ಪನ ಮೊಬೈಲ್ ನಲ್ಲಿ ಅದೇ ಶಾಲೆಯ ವಿದ್ಯಾರ್ಥಿನಿಯರ ನಗ್ನ ಫೋಟೋಗಳು ಬಂದಿದ್ದಾದರೂ ಹೇಗೆ, ಆ ವಿಡಿಯೋ ಹಾಗೂ ಚಿತ್ರಗಳು ಯಾವುವು ಎಂಬುದು ಸೂಕ್ತ ತನಿಖೆಯಿಂದ ಬಹಿರಂಗವಾಗಬೇಕಿದೆ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X