ಚಿತ್ರದುರ್ಗ | ಭದ್ರಾ ಮೆಲ್ದಂಡೆ ಯೋಜನೆ ಜಾರಿಗೆ ಸರ್ಕಾರದಿಂದ ಮೀನಮೇಷ: ರೈತರ ಆಕ್ರೋಶ

Date:

Advertisements

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ ಹೋರಾಟಗಾರ ಕಸವನಹಳ್ಳಿ ಪ್ರಕಾಶ್ ಕಿಡಿಕಾರಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಬಯಲು ಸೀಮೆಗೆ ನೀರು ಹರಿಸುವ ಭದ್ರ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಭದ್ರಾ ಮೇಲ್ದಂಡೆ ಪ್ಯಾಕೇಜ್ ಒಂದರ 12 ಕಿ.ಮೀ ಮಾಡಲು 15 ವರ್ಷವಾದರೂ ಸಾಧ್ಯವಾಗಿಲ್ಲ. ಖಾಯಂ ಆಗಿ ಬೀಡು ಬಿಟ್ಟಿರುವ ಇಂಜಿನಿಯರ್‌ಗಳು ಕೆಲಸ ಮಾಡದೆ ಆಯಕಟ್ಟಿನ ಜಾಗದಲ್ಲಿ ಕುಳಿತಿದ್ದಾರೆ ಎಂದರು.

ರಾಜ್ಯ ಸರ್ಕಾರ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸುವ ಅವಶ್ಯಕತೆ ಇಲ್ಲ. ಮತ್ತು ಎಲ್ಲಾ ಸರ್ಕಾರಗಳು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಹೊರತು ನೀರು ಹರಿಸುತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ಎತ್ತಿನಹೊಳೆಯಲ್ಲಿ ಮುಳುಗಿಸುತ್ತಾರೆ ಎನ್ನುವ ಆತಂಕ ಶುರುವಾಗಿದೆ ಎಂದರು.

Advertisements

ಬೆಸ್ಕಾಂ ಇಲಾಖೆಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಅಕ್ರಮ ಸಕ್ರಮ ಯೋಜನೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಬೆಸ್ಕಾಂ ಇಲಾಖೆ ಅಧಿಕಾರಿಗಳು ಕೂಡಲೇ ಪರಿಹರಿಸಿಕೊಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷರಾದ ಗಡಾರಿ ಕೃಷ್ಣಪ್ಪ ಎಚ್ಚರಿಕೆ ನೀಡಿದರು.

ವಿವಿಧ ಇಲಾಖೆಗಳಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಕ್ರಿಯಾ ಯೋಜನೆಯ ಪಟ್ಟಿಮಾಡಿ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಾತ್ರಿಕೇನಹಳ್ಳಿ ತಿಳಿಸಿದರು.

ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಗಿರಿ, ತಾಲೂಕು ಕಾರ್ಯಕಾರಿಣಿ ಜಯಣ್ಣ, ಪುಟ್ಟರಾಜು, ಸುಬ್ರಮಣಿ, ಜಯಪ್ರಕಾಶ್, ಕಾಳಿದಾಸ್, ರಾಮಚಂದ್ರ, ಅವಿನಾಶ್ , ತಿಪ್ಪೇಸ್ವಾಮಿ, ಕುಬೇರಪ್ಪ, ಸುದರ್ಶನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X