ಬೀದರ್ |‌ ಆಟವಾಡಲು ಹೋದ ಬಾಲಕ ನೀರಿನ ಗುಂಡಿಗೆ ಬಿದ್ದು ಸಾವು

Date:

Advertisements

ಬೀದರ್‌ ಜಿಲ್ಲೆಯ ಔರಾದ್ ಪಟ್ಟಣದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಕಾಲೇಜು ಕಟ್ಟಡ ನಿರ್ಮಾಣ ಜಾಗದಲ್ಲಿ ತೆಗೆದಿರುವ ಗುಂಡಿಗೆ ಬಿದ್ದ ಬಾಲಕನ್ನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.

ಔರಾದ್ ನಿವಾಸಿ ಜಿಶಾನ್ ಇಸ್ಮಾಯಿಲ್‌ (11) ಮೃತಪಟ್ಟ ಬಾಲಕ. ಬಾಲಕ 5ನೇ ತರಗತಿಯಲ್ಲಿ ಓದುತ್ತಿದ್ದ, ಶನಿವಾರ ಶಾಲೆಗೆ ರಜೆ ಹಿನ್ನಲೆ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಆಟವಾಡಲು ಹೋದ ವೇಳೆ ಆಕಸ್ಮಿಕವಾಗಿ ಗುಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಔರಾದ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಬಾಲಕನ ಶವ ತಾಲೂಕು ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ.

Advertisements

ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ :

ಈ ದುರ್ಘಟನೆಗೆ ಪಟ್ಟಣದ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ನೂತನ ಕಾಲೇಜು ಕೊಠಡಿ ನಿರ್ಮಾಣ ಮಾಡುತ್ತಿರುವ ಸಂಬಂಧಿಸಿದ ಗುತ್ತಿಗೆದಾರ ಹಾಗೂ ಇಂಜಿನಿಯರ್‌ ನಿರ್ಲಕ್ಷ್ಯವೇ ಕಾರಣ ಎಂದು ವಿದ್ಯಾರ್ಥಿ ಮಾನವ ಬಂಧುತ್ವ ವೇದಿಕೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರ ಐದು ಸಾವಿರ ನಗ್ನ ಫೋಟೋ, ವಿಡಿಯೋ ಪತ್ತೆ!

ವೇದಿಕೆಯ ರತ್ನದೀಪ ಕಸ್ತೂರೆ ನೇತ್ರತ್ವದಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿ, ʼವರ್ಷದ ಹಿಂದೆ ಕೂಡ ಐದು ವರ್ಷದ ಮಗುವೊಂದು ಇದೇ ರೀತಿ ಸಾವಿಗೀಡಾಗಿತ್ತು. ಅಂತಹ ಘಟನೆ ಮತ್ತೆ ನಡೆದಿದೆ. ಕೂಡಲೇ ತಪ್ಪಿಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕುʼ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X