ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ ಮತ್ತೆ ಮೂವರ ಮೃತದೇಹ ಪತ್ತೆಯಾಗಿದೆ. ಇದರಿಂದಾಗಿ ಲಕ್ನೋ ಕಟ್ಟಡ ಕುಸಿತದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.
ಹರ್ಮಿಲಾಪ್ ಬಿಲ್ಡಿಂಗ್ ಎಂದು ಗುರುತಿಸಲಾದ ಕಟ್ಟಡವನ್ನು ಔಷಧ ವ್ಯಾಪಾರಕ್ಕಾಗಿ ಗೋದಾಮಿನಂತೆ ಬಳಸಲಾಗುತ್ತಿತ್ತು. ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಕುಸಿತ ಸಂಭವಿಸಿದೆ.
ಸುಮಾರು ನಾಲ್ಕು ವರ್ಷಗಳ ಹಿಂದೆ ನಿರ್ಮಿಸಲಾದ ಕಟ್ಟಡವು ಕುಸಿತವಾಗುವ ಸಮಯದಲ್ಲಿ ಕೆಲವು ನಿರ್ಮಾಣ ಕಾರ್ಯಗಳೂ ಕೂಡಾ ನಡೆಯುತ್ತಿತ್ತು. ಘಟನೆ ನಡೆದಾಗ ಹಲವಾರು ಮಂದಿ ನೆಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಇದನ್ನು ಓದಿದ್ದೀರಾ? ಸೂರತ್ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಗಾಯಾಳುಗಳನ್ನು ಲೋಕ ಬಂಧು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾರಿಗೆ ನಗರ ಪ್ರದೇಶದಲ್ಲಿ ಕುಸಿದ ಕಟ್ಟಡದಲ್ಲೇ ಗೋಡೌನ್‌ಗಳು ಮತ್ತು ಮೋಟಾರ್ ವರ್ಕ್‌ಶಾಪ್‌ಗಳು ಇದ್ದವು. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
“ಮಳೆಯಾಗುತ್ತಿದ್ದರಿಂದ ನಾವು ನೆಲ ಮಹಡಿಗೆ ಬಂದಿದ್ದೇವೆ. ಕಟ್ಟಡದ ಪಿಲ್ಲರ್‌ನಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ್ದೇವೆ. ಇದ್ದಕ್ಕಿದ್ದಂತೆ, ಇಡೀ ಕಟ್ಟಡವು ನಮ್ಮ ಮೇಲೆ ಕುಸಿದಿದೆ” ಎಂದು ಪಿಟಿಐಗೆ ಗಾಯಾಳು ಆಕಾಶ್ ಸಿಂಗ್ ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ವೇಗಗೊಳಿಸಲು ಮತ್ತು ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
VIDEO | Lucknow building collapse: "Until now, in the rescue operation that we have conducted, we have recovered 28 injured people and they were immediately sent to the hospital for treatment, and their condition is now stable. Unfortunately, 8 people have died in this incident.… pic.twitter.com/YyMeYY2UmU
— Press Trust of India (@PTI_News) September 8, 2024
