ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಕರ್ನಾಟಕದ ಕರಾವಳಿಯ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ನಿರಂತರ ಗಾಳಿ ಇರುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಇದನ್ನು ಓದಿದ್ದೀರಾ? ಕರಾವಳಿ ಸೇರಿ ರಾಜ್ಯದ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ನಿರಂತರ ಗಾಳಿ ಇರುವ ಸಾಧ್ಯತೆಯಿದೆ ಇಲಾಖೆ ಹೇಳಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸುರಿಯಲ್ಲಿದ್ದು ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ತಲುಪುವು ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಮುಂದಿನ 5 ದಿನಗಳ#ಮಳೆ#ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
— Karnataka State Natural Disaster Monitoring Centre (@KarnatakaSNDMC) September 8, 2024
ಉತ್ತರ ಒಳನಾಡು ಪ್ರದೇಶದ ಉತ್ತರದ ಜಿಲ್ಲೆಗಳಲ್ಲಿ ಇಂದು ಚದುರಿದಿಂದ ವ್ಯಾಪಕವಾಗಿ pic.twitter.com/6ujSu1UlB9

So very good