ಭಾರತದಲ್ಲಿ ಶಂಕಿತ ಮಂಕಿಪಾಕ್ಸ್ ವೈರಸ್ ಪ್ರಕರಣ ಪತ್ತೆ

Date:

Advertisements

ಇತ್ತೀಚೆಗೆ ಹೊರ ದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಗೆ ಮಂಕಿಪಾಕ್ಸ್ (ಎಂಪಾಕ್ಸ್) ಬಂದಿದೆ ಎಂದು ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ರೋಗಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ಆರೋಗ್ಯವು ಸದ್ಯ ಸ್ಥಿರವಾಗಿದೆ ಎಂದು ವರದಿ ಉಲ್ಲೇಖಿಸಿದೆ. ಆದರೆ ಎಲ್ಲಿ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಲಾಗಿಲ್ಲ.

ಇದನ್ನು ಓದಿದ್ದೀರಾ? ಮಂಕಿಪಾಕ್ಸ್​ ಉಲ್ಬಣ; ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ WHO

Advertisements

ಮಂಕಿಪಾಕ್ಸ್ ಇದೆಯೇ ಎಂದು ತಿಳಿಯಲು ರೋಗಿಯ ರಕ್ತದ ಮಾದರಿಯ ಪರೀಕ್ಷೆ ನಡೆಸಲಾಗುತ್ತಿದೆ ಎಂದೂ ತಿಳಿಸಲಾಗಿದೆ. ಹಾಗೆಯೇ ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ ಎಂದು ಹೇಳಿದೆ.

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್​ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.

ಏನಿದು ಮಂಕಿಪಾಕ್ಸ್, ಲಕ್ಷಣಗಳೇನು?

ಮಂಕಿಪಾಕ್ಸ್ ಕೂಡಾ ಸಿಡುಬಿನ ಒಂದು ಪ್ರಭೇಡವಾಗಿದೆ. ಸಾಮಾನ್ಯ ಸಿಡುಬುಗಳಲ್ಲಿ ಬರುವಂತೆ ಇದರಲ್ಲಿಯೂ ಜ್ವರ, ತಲೆನೋವು, ಮೈ-ಕೈ ನೋವು, ಬೆನ್ನು ನೋವು, ಸುಸ್ತು ಕಾಣಿಸಿಕೊಳ್ಳುತ್ತದೆ. ಚರ್ಮ ಕೆಂಪಾಗಿ ಬೊಕ್ಕೆಗಳು ಶರೀರದ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಎರಡರಿಂದ ನಾಲ್ಕು ವಾರಗಳಲ್ಲಿ ಚಿಕಿತ್ಸೆ ಇಲ್ಲದಿದ್ದರೂ ಕಡಿಮೆಯಾಗುತ್ತದೆ. ಆದರೆ ಕ್ಯಾನ್ಸರ್, ಮಧುಮೇಹ ಇರುವವರು, ನವಜಾತ ಶಿಶುಗಳಿಗೆ ಮಂಕಿಪಾಕ್ಸ್ ಪ್ರಾಣಕ್ಕೆ ಕುತ್ತಾಗಬಹುದು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

Download Eedina App Android / iOS

X