ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ. ಸೆ.7ರ ತಡರಾತ್ರಿ ಈ ಘಟನೆ ನಡೆದಿದ್ದು, ಮೃತಳ ಪತಿ ದೇವರಡ್ಡೆಪ್ಪ ಬಾವಿಕಟ್ಟಿ ಹತ್ಯೆಗೈದ ಆರೋಪಿಯಾಗಿದ್ದಾನೆ.
ಪತ್ನಿಯ ಶೀಲದ ಮೇಲೆ ಶಂಕಿಸಿ ಮಕ್ಕಳಾಗದ ಕಾರಣ ಜಗಳ ಮಾಡಿ ಮನೆಯ ಬೆಡ್ ರೂಮಿನಲ್ಲಿ ಕಟ್ಟಿಗೆಯಿಂದ ಮುಖಕ್ಕೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಬಳಿಕ ತಾನು ಹಾಗೂ ಕುಟುಂಬದೊಂದಿಗೆ ಸೇರಿಕೊಂಡು ಕೊಲೆ ಮಾಡಿದ ವಿಷಯವನ್ನು ಮುಚ್ಚಿಟ್ಟು ಪತ್ನಿಯ ಪೋಷಕರಿಗೆ ಸುಳ್ಳು ಹೇಳಿ ಮೃತ ದೇಹವನ್ನು ಅವಸರದಿಂದ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಬೆಂಕಿ ಹಾಕಿ ಸುಟ್ಟಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಹಾವು ಪ್ರತ್ಯಕ್ಷ; ವಸತಿ ನಿಲಯದ ಸುತ್ತ ಸ್ವಚ್ಛತೆಗೆ ಆಗ್ರಹ
ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೈದ ಆರೋಪಿ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.