ಕೊಪ್ಪ | ಮಹಿಳಾ ಪೊಲೀಸ್‌ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಪಿಎಸ್ಐ ಬಸವರಾಜ್ ವಿರುದ್ಧ ಆರೋಪ

Date:

Advertisements

ಕೊಪ್ಪ ಪಿಎಸ್ಐ ಬಸವರಾಜ್ ತಮ್ಮದೇ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ‌ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತಷ್ಟು ಮಹಿಳಾ ಪೊಲೀಸರು ಇದೀಗ ತಮಗಾದ ಕಿರುಕುಳದ ಬಗ್ಗೆ ಮೇಲಾಧಿಕಾರಿಗಳ ಭೇಟಿಗೆ ಮುಂದಾಗಿದ್ದು, ಇಂದು ಮತ್ತೆ ಮೂವರು ಮಹಿಳಾ ಪೊಲೀಸ್ ಸಿಬ್ಬಂದಿಗಳು ಕೊಪ್ಪ ಡಿವೈಎಸ್‌ಪಿಯವರ ಬಳಿ ತೆರಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಕೊಪ್ಪ ಡಿವೈಎಸ್‌ಪಿ ಕಚೇರಿಯಲ್ಲಿ ಸದ್ಯ ಮಹಿಳಾ ಪೇದೆಗಳಿಗೆ ಕೌನ್ಸೆಲಿಂಗ್‌ ನಡೆಸಲಾಗುತ್ತಿದೆ. ಮೂವರು ಮಹಿಳಾ ಸಿಬ್ಬಂದಿಗಳಿಂದ ಡಿವೈಎಸ್‌ಪಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಪ್ಪ ಡಿವೈಎಸ್‌ಪಿ ಹಾಗೂ ಮಹಿಳಾ ಕೌನ್ಸೆಲಿಂಗ್‌ ತಜ್ಞರು ವಿಚಾರಣೆ ನಡೆಸುತ್ತಿದ್ದಾರೆ. ಪಿಎಸ್ಐ ಬಸವರಾಜು ಕಿರುಕುಳದಿಂದ ಬೇಸತ್ತಿರುವ ಮಹಿಳಾ ಸಿಬ್ಬಂದಿಗಳು ಮೇಲಧಿಕಾರಿಗಳ ಮೊರೆ ಹೋಗಿದ್ದಾರೆ. ಕಳೆದ 2 ದಿನಗಳ ಹಿಂದೆ ಮಹಿಳಾ ಪೇದೆ ಆತ್ಮಹತ್ಯೆಗೆ ಯತ್ನಿಸಿದ ನಂತರ ಇದೀಗ ಮತ್ತೆ ಕೆಲವರು ತಮ್ಮ ನೋವು ಹೇಳಿಕೊಂಡಿರುವುದಾಗಿ ತಿಳಿದುಬಂದಿದೆ.

ಈ ನಡುವೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸುವಾಗ ಸಿಬ್ಬಂದಿಗಳಿಂದ ರಕ್ಷಿಸಲ್ಪಟ್ಟ ಮಹಿಳಾ ಪೊಲೀಸ್‌ ಕಾನ್ ಸ್ಟೇಬಲ್ ಇಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸದ್ಯ ಎಲ್ಲರ ದೂರು ಕುರಿತು ಮಾಹಿತಿ ಕಲೆ ಹಾಕುತ್ತಿರುವ ಹಿರಿಯ ಅಧಿಕಾರಿಗಳು ಸಮಸ್ಯೆ ಆಲಿಸುತ್ತಿದ್ದಾರೆ. ಈ ನಡುವೆ ಮೇಲಧಿಕಾರಿಗಳ ಸೂಚನೆ ಮೇರೆಗೆ ಡೆತ್ ನೋಟ್ ನಾಶಪಡಿಸಿರುವ ಆರೋಪವೂ ಕೇಳಿಬಂದಿದ್ದು, ಪಿಎಸ್ಐ ಬಸವರಾಜ್ ಈ ಹಿಂದೆ ಕೆಲಸ ಮಾಡಿದ್ದ ಹಲವು ಠಾಣೆಗಳಲ್ಲೂ ಕೆಲ ಮಹಿಳಾ ಸಿಬ್ಬಂದಿಗಳಿಗೆ ಕಿರುಕುಳ ನೀಡಿರುವ ಆರೋಪವಿತ್ತು ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ರುವಾಂಡೊ ದೇಶದ ಹೈಕಮಿಷನರ್ ಭೇಟಿ; ಸುವರ್ಣ ವಿಧಾನಸೌಧದ ಕುರಿತು ಸತೀಶ್‌ ಜಾರಕಿಹೊಳಿ ಮಾಹಿತಿ

koppa

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಸಂತ್ರಸ್ತ ಮಹಿಳಾ ಕಾನ್‌ಸ್ಟೆಬಲ್‌ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, “ಆ ರೀತಿ ಯಾವುದೇ ಘಟನೆ ನಡೆದಿಲ್ಲ, ಸುಳ್ಳುಸುದ್ದಿ ಹರಿದಾಡಿದೆ. ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳು ಇರುವುದರಿಂದ ಕೌನ್ಸೆಲಿಂಗ್‌ ಪ್ರೊಸೆಸ್‌ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದ್ದು, ಘಟನೆ ನಡೆದ ದಿನವೂ ನಾನು ಡ್ಯೂಟಿಯಲ್ಲಿಯೇ ಇದ್ದೆ, ಇಂದೂ ಕೂಡಾ ಡ್ಯೂಟಿಯಲ್ಲಿಯೇ ಇದ್ದೇನೆ. ನಿಮಗೇನಾದರೂ ಮಾಹಿತಿ ಬೇಕಿದ್ದರೆ, ಪಿಎಸ್ಐ ಅವರನ್ನೇ ಸಂಪರ್ಕಿಸಿ ಎಂದು ಅಸಮಂಜಸ ಉತ್ತರ ನೀಡಿರುವುದು ಅನುಮಾನಕ್ಕೆ ಪುಷ್ಠಿ ನೀಡಿದಂತಾಗಿದೆ.

ಸುಳ್ಳುಸುದ್ದಿ ಹರಡಿದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ, ʼನಮ್ಮ ಹೆಸರು ಬಂದಿಲ್ಲ, ಹಾಗಿದ್ದಲ್ಲಿ ನಾನೇಕೆ ಮಾತನಾಡಲಿʼ ಎಂದು ಹೇಳಿರುವುದು ಒಟ್ಟಾರೆಯಾಗಿ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವುದನ್ನು ಖಾತರಿಪಡಿಸುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X