ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ್ (59) ಅವರು ಸೋಮವಾರ ಬೆಳಗಿನ ಜಾವ 3.13ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.
ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದಾರೆ.
ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ, ಕನ್ನಡ ಪ್ರಭ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.
ಇದನ್ನು ಓದಿದ್ದೀರಾ? ಉಡುಪಿ | ಸನ್ಮಾರ್ಗ, ಅನುಪಮ ಪತ್ರಿಕೆಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ವೈ ಸಿ ಅಬ್ದುಲ್ಲಾ ನಿಧನ
ಶೀರ್ಷಿಕೆಗಳ ಮೂಲಕವೇ ಹೆಸರು ಪಡೆದಿದ್ದ ವಸಂತ ನಾಡಿಗೇರ್ ಅವರನ್ನು ಹೆಡ್ಲೈನ್ ಮಾಸ್ತರ್ ಎಂದೂ ಕರೆಯಲಾಗುತ್ತಿತ್ತು.
ವಸಂತ ನಾಡಿಗೇರ್ ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದ್ದು ಬಳಿಕ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ರಾಸಯಾನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಸಂತ ನಾಡಿಗೇರ್ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮೊದಲು ಎಂಬತ್ತರ ದಶಕದಲ್ಲಿ ಮುಖ ಮಾಡಿದ್ದಾರೆ. ಸಂಯುಕ್ತ ಕರ್ನಾಟಕದಲ್ಲಿ ತನ್ನ ವೃತ್ತಿ ಜೀವನ ಆರಂಭಿಸಿದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದೆ.
ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
— CM of Karnataka (@CMofKarnataka) September 9, 2024
ಮೃತರ ಆತ್ಮಕ್ಕೆ ಶಾಂತಿ… pic.twitter.com/QZ49ZQGefo
ವಸಂತ ನಾಡಿಗೇರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ್ ಅವರ ನಿಧನವಾರ್ತೆ ನೋವುಂಟುಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.
