ಚಿತ್ರದುರ್ಗದಲ್ಲಿ ಬಿಎಸ್ ಪಿ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ

Date:

Advertisements

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳಿಗೆ ಒಳಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ಅಪಸ್ವರ ಎತ್ತಿರುವ ಬಿಎಸ್‌ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಹಾಗೂ ಉ.ಪ್ರ.ಮಾಜಿ ಸಿಎಂ ಮಾಯಾವತಿ ಅವರ ನಿಲುವನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಬಹುಜನ ಸಮಾಜ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜಿನಾಮೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಎಸ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್ ಮಾತನಾಡಿ, ಒಳಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಮಹತ್ವದ ತೀರ್ಪಿನ್ನು ವಿರೋಧಿಸಿರುವ ಮಾಯಾವತಿ ನೀಡಿರುವ ಹೇಳಿಕೆ ನಮಗೆ ಅಸಮಾಧಾನ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಿಂದ ಐವರು ನಾಯಕರು ಅಹವಾಲು ಸಲ್ಲಿಸಲು ಹೋದಾಗ ಸೌಜನ್ಯಕೂ ಮಾತನಾಡಿಸದೆ ಅವಮಾನಿಸಿದ್ದಾರೆ. ಇದೇ ರೀತಿ ಆಂದ್ರ ಪ್ರದೇಶ ಮತ್ತು ತೆಲಂಗಾಣ ನಾಯಕರಿಗೂ ಆಗಿದೆ. ಇದೆಲ್ಲದರಿಂದ ನಮಗೆ ಅಸಮಾಧಾನ ಇದ್ದು, ಬಹುಜನ ಸಮಾಜ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶೀರಾಂ ರವರ ಸಿದ್ದಾಂತಗಳಿಂದ ದೂರಸರಿದಿದೆ. ಹಾಗೂ ಪಕ್ಷದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಳೆದುಕೊಂಡಿದ್ದು ಅಲ್ಲಿ ನಿಕೃಷ್ಟ ಸಮುದಾಯಗಳ ಕೂಗು ಅರಣ್ಯ ರೋಧನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಮಾಯಾವತಿ ಅವರ ಹೇಳಿಕೆ ವಿರೋಧಿಸಿ ಈಗಾಗಲೇ ಬಿಎಸ್‌ಪಿ ರಾಜ್ಯಾಧ್ಯಕ್ಷರಿಗೆ ಸಾಮೂಹಿಕವಾಗಿ ರಾಜಿನಾಮೆ ನೀಡಿದ್ದೇವೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಬಹುಜನ ಸಮಾಜ ಪಾರ್ಟಿಯನ್ನು ಪುನ‌ರ್ ರಚಿಸುತ್ತೇವೆ. ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಅವರು ಕೂಡ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ 14 ಪುಟಗಳ ಪತ್ರ ಬರೆದಿದ್ದು, ನಮಗೆ ಅಸಮಾಧಾನ ಇರುವುದರಿಂದ ಕರ್ನಾಟಕ ಬಹುಜನ ಸಮಾಜ ಪಾರ್ಟಿ ಕಟ್ಟುವುದಾಗಿ ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಬಿಎಸ್‌ಪಿ ಜಿಲ್ಲಾ ಸಂಯೋಜಕ ಕೆ.ಎನ್.ದೊಡ್ಡೆಟ್ಟೆಪ್ಪ, ಸಂಯೋಜಕ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಹನುಮಂತರಾಯ, ಕಾರ್ಯದರ್ಶಿಗಳಾದ ಶ್ರೀನಿವಾಸ್‌, ಎಂ.ಜಗದೀಶ್, ಲಕ್ಷ್ಮಕ್ಕ, ರಾಘವೇಂದ್ರ, ಮಹಾಲಿಂಗಪ್ಪ, ಚಂದ್ರಣ್ಣ, ರಂಗಸ್ವಾಮಿ, ನರಸಿಂಹಮೂರ್ತಿ, ಗುರುಸ್ವಾಮಿ, ಗೋವಿಂದಪ್ಪ, ರಾಜೇಶ್ ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X