ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆಯನ್ನು ನಡೆಸಿದೆ.
ಇದನ್ನು ಓದಿದ್ದೀರಾ? ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್
ಪ್ರೊ. ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸೆಪ್ಟೆಂಬರ್ 3ರಂದು ನೇಮಕ ಮಾಡಲಾಗಿದೆ ಎಂದು ವಕೀಲ ಅಶೋಕ್ ನಾಯ್ಕ್ ತಿಳಿಸಿದ್ದಾರೆ. ಹೀಗಾಗಿ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗುವುದು ನ್ಯಾಯಾಲಯ ತಿಳಿಸಿದೆ.
ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14ರಂದು ಪ್ರಕರಣ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಹೀಗಾಗಿ, ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ ೧೯ಕ್ಕೆ ಮುಂದೂಡಿದ ನ್ಯಾಯಾಲಯ. @BSYBJP #KarnatakaHighCourt #POCSO
— ಬಾರ್ & ಬೆಂಚ್ – Kannada Bar & Bench (@Kbarandbench) September 9, 2024
ಈ ನಡುವೆ ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಬಳಿಕ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿದ್ದರು.
ಅದಾದ ಬಳಿಕ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದಾರೆ.
