ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಸುಪ್ರೀಂ ಕೋರ್ಟಿನ ತೀರ್ಪಿನಂತೆ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವಲ್ಲಿ ರಾಜ್ಯ ಸರಕಾರ ಹಿಂದೇಟು ಹಾಕುತ್ತಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.
2023 -24 ಮತ್ತು 2024-24 ನೇ ಸಾಲಿನಲ್ಲಿ 25,391 ಕೋಟಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಅಭಿವೃದ್ಧಿಯ ಹಣವನ್ನು ದುರ್ಬಳಕ್ಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಹಣವನ್ನು ಅದೇ ಸಮಾಜದ ಅಭಿವೃದ್ಧಿಗೆ ವಾಪಸ್ ನೀಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ ? ಯಾದಗಿರಿ | ದಲಿತ ಯುವತಿಗೆ ಲೈಂಗಿಕ ದೌರ್ಜನ್ಯ; ಡಿವೈಎಸ್‌ಪಿ ಕಚೇರಿ ಎದುರು ದಸಂಸ ಧರಣಿ
ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಮೆರಿಟ್ ವಿದ್ಯಾರ್ಥಿ ವೇತನ ಸಮರ್ಪಕವಾಗಿ ನೀಡುತ್ತಿಲ್ಲ. ವಿದೇಶದಲ್ಲಿ ಎಸ್.ಸಿ, ಎಸ್.ಟಿ. ವ್ಯಾಸಂಗ ಮಾಡಲು ಪ್ರಬುದ್ಧ ಯೋಜನೆ ರದ್ದು ಮಾಡಲಾಗಿದೆ. ಪುನಃ ಆರಂಭಿಸಬೇಕೆಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ ಜಾರಿಯಾಗುವವರೆಗೂ ಕೇಂದ್ರ ಮತ್ತು ರಾಜ್ಯದ ಎಲ್ಲಾ ಉದ್ಯೋಗ ನೇಮಕಾತಿಗಳನ್ನು ಸ್ಥಗಿತಗೊಳಿಸಬೇಕು, ಖಾಸಗಿ ಉದ್ಯೋಗ ಕ್ಷೇತ್ರ ಮತ್ತು ಗುತ್ತಿಗೆ ನೇಮಕಾತಿಗಳಲ್ಲಿಯೂ ಎಸ್.ಸಿ, ಎಸ್.ಟಿ ಮೀಸಲಾತಿ ಜಾರಿ ಮಾಡಬೇಕು. ಕೇಂದ್ರ ಸರ್ಕಾರ ಕೂಡಲೇ ಎಸ್‌ಸಿ, ಎಸ್‌ಟಿ ಅಭಿವೃದ್ಧಿಗಾಗಿ ಎಸ್‌ಸಿ, ಎಸ್‌ಟಿ ಕಾಯ್ದೆ ರಚಿಸಿ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಹಣ ನೀಡಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ಇನ್ನೊಬ್ಬರಿಗೆ ಒಳಮೀಸಲಾತಿ ಬೇಡ ಎನ್ನುವ ಹಕ್ಕಾಗಲಿ, ನೈತಿಕತೆಯಾಗಲಿ ಯಾರಿಗೂ ಇಲ್ಲ- ದೇವನೂರ ಮಹಾದೇವ
ಈ ಸಂದರ್ಭದಲ್ಲಿ ಡಿಎಸ್‌ಎಸ್ ಜಿಲ್ಲಾಧ್ಯಕ್ಷ ಅಶೋಕ ನಂಜಲದಿನ್ನಿ, ಉಪಾಧ್ಯಕ್ಷ ರಂಗಪ್ಪ ಕೋತಿಗುಡ್ಡ, ಎಂ. ಮನೋಹರ ಸಿರವಾರ, ರಾಜು ಬೊಮ್ಮ ನಾಳ, ಜಯರಾಜ್ ಟೈಗರ್, ಬಸವರಾಜ ನಾಡಂಗಿ ಕಲ್ಮಲ, ಹುಲುಗಪ್ಪ, ಯೇಸು, ಮೌನೇಶ, ಚಂದ್ರಪ್ಪ, ಬಸವರಾಜ, ಮಾರೆಪ್ಪ, ವಿಜಯ ಕುಮಾರ, ಆನಂದಪ್ಪ, ರಾಜಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.
