ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೆ.9 ಮತ್ತು 10ರಂದು ಎರಡು ದಿನಗಳ ಕಾಲ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಆದರೆ ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ.
ಸೋಮವಾರ ಮುಂಜಾನೆಯಿಂದಲೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು, ರಾಜ್ಯದಲ್ಲಿ ಶಾಂತಿಗಾಗಿ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ರಾಜ್ಯದಲ್ಲಿ ಶಾಂತಿಗಾಗಿ ತುರ್ತು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
ಮಣಿಪುರದ ಇಂಫಾಲ್ನಲ್ಲಿ ಸಿಆರ್ಪಿಎಫ್ ಬೆಂಗಾವಲು ವಾಹನದ ಮೇಲೆ ಆಲ್ ಮಣಿಪುರ ಸ್ಟೂಡೆಂಟ್ಸ್ ಯೂನಿಯನ್ (ಎಎಂಎಸ್ಯು) ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ
ವಿದ್ಯಾರ್ಥಿ ಪ್ರತಿಭಟನಾಕಾರರು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಪ್ರಾರಂಭಿಸಿದ್ದಾರೆ. ಇಂಫಾಲ್ ಪೂರ್ವದ ಸಂಜೆಂಥೋಂಗ್ನಲ್ಲಿ ವಿದ್ಯಾರ್ಥಿಗಳು ಮತ್ತ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.
ಮುಖ್ಯಮಂತ್ರಿಯವರ ಅಧಿಕೃತ ನಿವಾಸದ ಸಮೀಪವೇ ಪ್ರತಿಭಟನೆಯನ್ನು ನಡೆಸಲಾಗಿದೆ. ಜೊತೆಗೆ ರಾಜಭವನದ ಹೊರಗೆಯೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
“ಗವರ್ನರ್ ಏಕೀಕೃತ ಆದೇಶವನ್ನು ನಮ್ಮ ಮುಖ್ಯಮಂತ್ರಿಗೆ ವರ್ಗಾಯಿಸದಿದ್ದರೆ, ನಾವು ಇಲ್ಲಿಯೇ ಇರುತ್ತೇವೆ. ಸಾರ್ವಜನಿಕರನ್ನು ನೇರವಾಗಿ ಉದ್ದೇಶಿಸಿ ಮಾತನಾಡುವಂತೆ ನಾವು ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ” ಎಂದು ವಿದ್ಯಾರ್ಥಿಗಳು ತಿಳಿಸಿರುವುದಾಗಿ ಅಸ್ಸಾಂ ಟ್ರಿಬ್ಯೂನ್ ವರದಿ ಮಾಡಿದೆ.
BIG BREAKING 🚨
— Rohini Anand (@mrs_roh08) September 9, 2024
Students hold a protest march against the BJP govt in Manipur.
Revolution on the streets of Manipur 🔥 pic.twitter.com/FoPvKAY53l
