ಬೈಜೂಸ್‌ನಿಂದ ಭಾರತದಲ್ಲಿ ಹೆಚ್ಚಿನ ಹೂಡಿಕೆ: ಸಿಇಒ ರವೀಂದ್ರನ್‌

Date:

Advertisements
  • 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ
  • ಬೈಜೂಸ್ ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ

ವಿದೇಶಿ ವಿನಿಮಯ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಿಇಒ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿ ಶೋಧ ನಡೆಸಿದೆ. ಈ ಬೆನ್ನಲ್ಲೇ, ರವೀಂದ್ರನ್‌ ಬೈಜು ಅವರು ಈ ಕುರಿತು ಸಂಸ್ಥೆಯ ಉದ್ಯೋಗಿಗಳಿಗೆ ಪತ್ರ ಬರೆದಿದ್ದಾರೆ.

ಭಾರತಕ್ಕೆ ವಿದೇಶಿ ನೇರ ಬಂಡವಾಳ (ಎಫ್‌ಡಿಐ) ತರುವುದರಲ್ಲಿ, ಇತರ ನವೋದ್ಯಮಗಳಿಗೆ ಹೋಲಿಸಿದರೆ ಬೈಜೂಸ್‌ ಪಾಲು ಹೆಚ್ಚಿಗೆ ಇದೆ ಎಂದು ಕಂಪನಿ ಸಿಇಒ ಬೈಜು ರವೀಂದ್ರನ್‌ ಪತ್ರದಲ್ಲಿ ತಿಳಿಸಿದ್ದಾರೆ.

“ವಿದೇಶಿ ವಿನಿಮಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲ ನಿಯಮಗಳನ್ನು ಕಂಪನಿ ಪಾಲಿಸಿದೆ. 55 ಎಫ್‌ಡಿಎ ಆರ್ಕಷಣೆಗೆ ಒಳಗಾಗಿರುವ ಕಾರಣ ಹಲವಾರು ಪ್ರತಿಭಾನ್ವಿತ ನವೋದ್ಯಮಿಗಳಿಗೆ ಕೆಲಸ ಕೊಡುವಂತಾಯಿತು. ಇದರಿಂದಾಗಿಯೇ ಭಾರತದ ಅತಿದೊಡ್ಡ ಉದ್ಯೋಗದಾತ ಕಂಪನಿ ಆಗಿ ಬೈಜೂಸ್ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಹೇಳಿದ್ದಾರೆ.

Advertisements

“ಬೈಜೂಸ್ ಒಮ್ಮೆ‍ 1.80 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿತ್ತು. ಜನರಲ್ ಅಟ್ಲಾಂಟಿಕ್, ಬ್ಲಾಕ್ ರಾಕ್ ಮತ್ತು ಸಿಕೊಯಾ ಕ್ಯಾಪಿಟಲ್ ತರಹದ ಜಾಗತಿಕ ಹೂಡಿಕೆದಾರರನ್ನೂ ಆಕರ್ಷಿಸಿತ್ತು. 70ಕ್ಕೂ ಹೆಚ್ಚು ಹೂಡಿಕೆದಾರರು ಬೈಜೂಸ್‌ನಲ್ಲಿ ಹೂಡಿಕೆ ಮಾಡಿದ್ದು, ‘ಫೆಮಾ’ ನಿಯಮಗಳ ಪಾಲನೆ ಸೇರಿದಂತೆ ಸಂಸ್ಥೆಯ ಕಾರ್ಯನಿರ್ವಹಣೆ ಬಗ್ಗೆ ಸಂತೃಪ್ತಿ ಹೊಂದಿದ ಬಳಿಕವೇ ಹಣ ಹೂಡಿಕೆ ಮಾಡಿದ್ದಾರೆ. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಈ ಬಗ್ಗೆ ಅರ್ಥವಾಗಲಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಸ್ವಾಧೀನ ಪ್ರಕ್ರಿಯೆಗಳನ್ನು ಕೈಗೊಂಡಿದ್ದು, ಅದಕ್ಕಾಗಿ ಒಂದಿಷ್ಟು ಹಣವನ್ನು ಕಳುಹಿಸಲಾಗಿತ್ತು. ಕಂಪನಿಯ ಬೆಳವಣಿಗೆಯ ಭಾಗವಾಗಿ 79 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಾಗಿದೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇ.ಡಿ ದಾಳಿ

“ಸಂಸ್ಥೆಯು 2011 ಮತ್ತು 2023ರ ನಡುವೆ 28,000 ಕೋಟಿ ರೂ.ಗೂ ಅಧಿಕ ವಿದೇಶಿ ನೇರ ಹೂಡಿಕೆ ಪಡೆದಿದೆ. ಹೆಚ್ಚಿನ ಹೂಡಿಕೆ ಪಡೆದುಕೊಂಡಿದ್ದರಿಂದ 55 ಸಾವಿರ ಪ್ರತಿಭಾನ್ವಿತರಿಗೆ ಉದ್ಯೋಗ ನೀಡಲು ಸಾಧ್ಯವಾಯಿತು. ಇದರಿಂದಾಗಿ ದೇಶದ ನವೋದ್ಯಮಗಳ ಪೈಕಿ ಅತಿ ದೊಡ್ಡ ಉದ್ಯೋಗದಾತ ಕಂಪನಿಯಾಗಿ ಹೊರಹೊಮ್ಮಲು ಸಾಧ್ಯವಾಯಿತು” ಎಂದು ಬೈಜು ರವೀಂದ್ರನ್‌ ಹೇಳಿದ್ದಾರೆ.

“ಇದೇ ಅವಧಿಯಲ್ಲಿ ಸಂಸ್ಥೆಯು 9,754 ಕೋಟಿ ರೂ.ಗಳನ್ನು ವಿದೇಶಿ ನೇರ ಹೂಡಿಕೆ ಹೆಸರಿನಲ್ಲಿ ವಿದೇಶಗಳಿಗೆ ರವಾನಿಸಿದೆ. ಆದರೆ, “ವಿದೇಶಿ ಸಂಸ್ಥೆಗಳ ವಿಲೀನಕ್ಕಾಗಿ ಈ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಲೀನವು ಸಂಸ್ಥೆಯ ಜಾಗತಿಕ ವಿಸ್ತರಣೆಯ ಭಾಗವಾಗಿದೆ,” ಎಂದು ಬೈಜು ರವೀಂದ್ರನ್‌ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಳಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದ್ದು, ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮುಚ್ಚುವಿಕೆ ವಿರೋಧಿಸಿ ಎಐಡಿಎಸ್‍ಒ 50 ಲಕ್ಷ ಸಹಿ ಸಂಗ್ರಹ; ಮುಖ್ಯಮಂತ್ರಿಗಳಿಗೆ ಸಲ್ಲಿಕೆ

ಕರ್ನಾಟಕ ರಾಜ್ಯ ಸರ್ಕಾರವು 6,200 ಸರ್ಕಾರಿ ಶಾಲೆಗಳನ್ನು "ವಿಲೀನ"ಗೊಳಿಸುವ ಹೆಸರಿನಲ್ಲಿ ಮುಚ್ಚಲು...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ದಾವಣಗೆರೆ | ಭಾರತದ ಗ್ರಂಥಾಲಯ ಪಿತಾಮಹ ರಂಗನಾಥ್ ಜನ್ಮದಿನ; ವಿವಿಯಲ್ಲಿ ಗ್ರಂಥಾಲಯ ಕಾರ್ಯಾಗಾರ

ಭಾರತದ ಗ್ರಂಥಾಲಯ ಪಿತಾಮಹ ಡಾ.ಎಸ್.ಆರ್. ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ...

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ವರದಿ ಸಲ್ಲಿಕೆ, ದ್ವಿಭಾಷಾ ನೀತಿ ಅನುಷ್ಠಾನ ಸೇರಿ ಹಲವು ಶಿಫಾರಸು

ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ...

Download Eedina App Android / iOS

X