ಮಧುಗಿರಿಯಲ್ಲಿ ಭೀಕರ ಕಾರು ಅಪಘಾತ 6 ಮಂದಿ ಸಾವು : ಅಪಘಾತ ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ್ ಭೇಟಿ

Date:

Advertisements

ಮಧುಗಿರಿ ತಾಲ್ಲೂಕಿನ ಕಾಟಗಾನಹಟ್ಟಿ ಮತ್ತು ಕೆರೆಗಳಪಾಳ್ಯ ಸಮೀಪ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ, ಮೃತಪಟ್ಟವರ ಹಾಗೂ ಗಾಯಾಳುಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಧೈರ್ಯ ತೆಗೆದುಕೊಳ್ಳುವಂತೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಸ್ತೆ ನೇರವಾಗಿದ್ದರೂ ಸಹ ಅಪಘಾತ ಸಂಭವಿಸಿರುವುದು ಅಚ್ಚರಿ ಮೂಡಿಸಿದೆ. ಘಟನಾ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಲಾಭು ರಾಮ್ ಅವರು ಆಗಮಿಸಿದ್ದು, ಘಟನೆಗೆ ನಿಖರವಾದ ಕಾರಣವೇನು? ಇಂತಹ ಘಟನೆಗಳು ಮರುಕಳಿಸದಂತೆ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

Advertisements

ರಾಜ್ಯದಲ್ಲಿ ಅಪಘಾತ ನಿಯಂತ್ರಿಸಲು ಇಲಾಖೆಯ ಅನುದಾನವನ್ನು ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೈಸೂರು ಹೆದ್ದಾರಿಯಲ್ಲಿ ಕಳೆದ ವರ್ಷ, 4 ತಿಂಗಳ ಅವಧಿಯಲ್ಲಿ 100ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಅಪಘಾತ ವಲಯಗಳನ್ನು ಗುರುತಿಸಿ ಪ್ರತಿಬಿಂಬಕ, ಸೂಚನಾ ಫಲಕ, ಮಾರ್ಗ ಸೂಚನಾ ಫಲಕಗಳನ್ನು ಅಳವಡಿಸುವುದರ ಜೊತೆಗೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಅಪಘಾತ ಸಂಖ್ಯೆ ಇಳಿಕೆಯಾಗಿದೆ. ರಸ್ತೆ ಸುರಕ್ಷತಾ ಕ್ರಮಕೈಗೊಳ್ಳಲು ನೂರು ಕೋಟಿ ರೂ. ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ವಾಹನ ಚಾಲಕರು ಅತಿಯಾದ ವೇಗದಲ್ಲಿ ವಾಹನ ಚಾಲನೆ ಮಾಡದಂತೆ, ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ತಿಳುವಳಿಕೆ ನೀಡಲಾಗುತ್ತಿದೆ. ಅತೀಯಾದ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರ ಪರವಾನಗಿಯನ್ನು ರದ್ದು ಮಾಡಲು ಕ್ರಮ ಕೈಗೊಳ್ಳಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರಲ್ಲದೆ, ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 80 ಕಿ.ಮೀ. ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಡುವವರ ಮೇಲೆ ನಿಗಾ ವಹಿಸಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅತಿಯಾದ ವೇಗದಲ್ಲಿ ಚಾಲನೆ ಮಾಡುವವರನ್ನು ಗುರುತಿಸಿ ತಕ್ಷಣವೇ ದಂಡ ವಿಧಿಸಲಾಗುತ್ತಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲೂ ಕ್ಯಾಮರಾಗಳನ್ನು ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X