ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ.
ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ ಮತ್ತು ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ನಟ ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೂ ವಿಸ್ತರಿಸಿ ಕೋರ್ಟ್ ಆದೇಶ
ನ್ಯಾಯಾಲಯದ ಈ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
Justice Hemant Chandangoudar restrains the media from "airing, printing, publishing, and broadcasting" any details of the Chargesheet. #DarshanThoogudeepa https://t.co/weDOraYMNR
— Bar and Bench (@barandbench) September 10, 2024
