ವಾಲ್ಮೀಕಿ ನಿಗಮ ಅಕ್ರಮದ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

Date:

Advertisements

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 196 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯ ಸಂಪೂರ್ಣ ಮಾಸ್ಟರ್ ಮೈಂಡ್ ಮಾಜಿ ಸಚಿವ ನಾಗೇಂದ್ರ ಎಂಬುದು ಬಯಲಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬಹುಕೋಟಿ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ 82 ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೋಷಾರೋಪ ಪಟ್ಟಿಯಲ್ಲಿ ಹಗರಣ ಹೇಗೆ ನಡೆಯಿತೆಂದು ಎಳೆಎಳೆಯಾಗಿ ಬರೆದಿದ್ದಾರೆ. ನಾಗೇಂದ್ರ ಸೇರಿ ಐದು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು, ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇ.ಡಿ ಉಲ್ಲೇಖಿಸಿದೆ.

Advertisements

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸತ್ಯನಾರಯಣವರ್ಮ ಜೊತೆ ನಿಕಟ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಹಣದ ಬಳಕೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. ಈ ಹಣದಲ್ಲಿ ಒಟ್ಟು 21 ಕೋಟಿ ರೂ. ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಮನಿಟ್ರಯಲ್ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.

ಸಿಎಂ ಭೇಟಿಯಾದ ದದ್ದಲ್​​

ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದಂತೆ ಇತ್ತ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಶಾಸಕ ಬಸನಗೌಡ ದದ್ದಲ್​ ವಾಲ್ಮೀಕಿ ನಿಗಮದ ಹಗರಣದಲ್ಲಿ ವಿಚಾರಣೆ ಎದುರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X