ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದ್ದು, ಸೆಪ್ಟೆಂಬರ್ 15ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಭಾರತ ರೈಲು ಸಂಚಾರಕ್ಕೆ ಸೆಪ್ಟೆಂಬರ್ 15ರಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಜತೆಗೆ ಬೆಳಗಾವಿ, ಕಿತ್ತೂರು ಮಾರ್ಗದಿಂದ ಧಾರವಾಡಕ್ಕೆ ಹೋಗುವ ರೈಲು ಮಾರ್ಗ ಸದ್ಯದಲ್ಲೇ ಆರಂಭವಾಗಲಿದ್ದು, ಈ ಕುರಿತು ಕೇಂದ್ರ ರೈಲ್ವೆ ಸಚಿವರ ಜೊತೆ ಚರ್ಚಿಸಲಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಭಾರೀ ಮಳೆಗೆ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತಸಂಘ ಆಗ್ರಹ
“ಎರಡ್ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಯಲ್ಲಿದೆ. ಬೆಂಗಳೂರು ಟು ಬೆಳಗಾವಿ ಮಾರ್ಗದಲ್ಲಿ ಬರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವೂ ಸದ್ಯದಲ್ಲೇ ಆರಂಭವಾಗಲಿದೆ. ಈ ಕುರಿತು ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.