ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದ್ದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲೆಂದು ಸರ್ಕಾರವು 5 ದಿನಗಳವರೆಗೆ ಇಂಟರ್ನೆಟ್ ಅನ್ನು ನಿಷೇಧಿಸಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಮಾತ್ರವಲ್ಲದೆ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್‌ಗಳನ್ನೂ ನಿಷೇಧಿಸಲಾಗಿದೆ. ಇನ್ನು ಈಗಾಗಲೇ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು
ದುಷ್ಕರ್ಮಿಗಳು ರಾಜ್ಯದಲ್ಲಿ ಹಿಂಸಾಚಾರವನ್ನು ಮತ್ತಷ್ಟು ಪ್ರಚೋದಿಸುವ ಚಿತ್ರಗಳನ್ನು ಪ್ರಸಾರ ಮಾಡುವುದಕ್ಕೆ, ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾಧ್ಯಮವನ್ನು ಬಳಸಿಕೊಳ್ಳಬಹುದು. ಆದ್ದರಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.
ಮಣಿಪುರದಲ್ಲಿ ಮೈತಿ ಮತ್ತು ಕುಕಿ ಸಮುದಾಯದ ನಡುವೆ ಒಂದು ವರ್ಷಕ್ಕೂ ಅಧಿಕ ಕಾಲದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ ಈಗಾಗಲೇ 200ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಕಳೆದ ವಾರ ಕನಿಷ್ಠ 11 ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ.
ವಿದ್ಯಾರ್ಥಿಗಳು ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪ್ರತಿಭಟನೆ ವೇಳೆ ಕಲ್ಲು ತೂರಾಟವಾಗಿದ್ದು ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ. ಇದಾದ ಬೆನ್ನಲ್ಲೇ ಮೈತಿ ಪ್ರಾಬಲ್ಯದ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಘೋಷಿಸಲಾಗಿದೆ.

