ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಆರೋಪದಲ್ಲಿ ಬಂಧನವಾಗಿರುವ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ನೀಡಿದೆ.
2017ರ ಭಯೋತ್ಪಾದಕರಿಗೆ ಧನಸಹಾಯ ಮಾಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 2017ರಲ್ಲಿ ರಶೀದ್ ಅವರನ್ನು ಬಂಧಿಸಲಾಗಿದೆ. 2019ರಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.
ಇದನ್ನು ಓದಿದ್ದೀರಾ? ಪ್ರಮಾಣ ವಚನ ಸ್ವೀಕಾರಕ್ಕೆ ಸಂಸದ ಇಂಜಿನಿಯರ್ ರಶೀದ್‌ಗೆ ಪೆರೋಲ್ ನೀಡಿದ ದೆಹಲಿ ಹೈಕೋರ್ಟ್
ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ನೀಡಿದ ಆರೋಪದಲ್ಲಿ ಎನ್‌ಐಎ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಇಂಜಿನಿಯರ್ ರಶೀದ್ ಹೆಸರು ಕೇಳಿಬಂದಿದೆ
ಈ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಸಂಸ್ಥೆ ಆರೋಪಪಟ್ಟಿ ಸಲ್ಲಿಸಿತ್ತು.
Delhi court grants interim bail till October 2 to Lok Sabha MP Engineer Rashid in terror funding case
— Press Trust of India (@PTI_News) September 10, 2024
2022ರಲ್ಲಿ ಮಲಿಕ್ ಅವರು ಆರೋಪಗಳಿಗೆ ತಪ್ಪೊಪ್ಪಿಕೊಂಡ ನಂತರ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದ ರಶೀದ್
ರಶೀದ್ ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದರು.
