ಕೈಗಾರಿಕೆ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪೂರ್ಣ ಸಹಕಾರ: ಎಂ ಬಿ ಪಾಟೀಲ್‌ರಿಗೆ ಎಚ್‌ ಡಿ ಕುಮಾರಸ್ವಾಮಿ ಭರವಸೆ

Date:

Advertisements

ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಅಭಿವೃದ್ಧಿ ಕುರಿತ ಸಂಗತಿಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರೀ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು; ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕೆಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು; ಸಂಪೂರ್ಣ ಸಹಕಾರದ ಭರವಸೆ ಕೊಟ್ಟರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ನೀಡಿದರು.

Advertisements

ಈ ಸಂದರ್ಭದಲ್ಲಿ “ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಕುಮಾರಸ್ವಾಮಿ ಅವರು ಎಂ ಬಿ ಪಾಟೀಲ್ ಅವರಿಗೆ ಹೇಳಿದರು.

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ತೆಗೆದುಕೊಂಡ ಸಚಿವರು; ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಹೆಚ್ಚು ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಎಚ್‌ಎಂಟಿ ಭೂಮಿ ವಿವಾದ ಬಗ್ಗೆಯೂ ಚರ್ಚೆ

ಈ ಸಂದರ್ಭದಲ್ಲಿ ಎಚ್‌ಎಂಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. “ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ಈ ದಿಸೆಯಲ್ಲಿ ಎಂಬಿ ಪಾಟೀಲ್ ಅವರ ಜತೆ ನಡೆಸಿದ ಮಾತುಕತೆ ಉತ್ತಮ ರೀತಿಯಲ್ಲಿ ಇತ್ತು” ಎಂದು ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X