ದೇಶದ ಗಡಿಯಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿ ಹುಟ್ಟೂರಿಗೆ ವಾಪಸಾದಾ ಯೋಧ ಸಿದ್ದರಾಮ ಮುನ್ನೊಳಿ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದು, ಇಡೀ ಊರೇ ಹೂಮಳೆಗೆರೆದು ಅದ್ದೂರಿ ಮೇರವಣಿಗೆ ನಡೆಸುವ ಮೂಲಕ ಹಬ್ಬದಂತೆ ಸಂಭ್ರಮಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಪಡಸಾವಳಿ ಗ್ರಾಮದಲ್ಲಿ ಎಲ್ಲೆಂದರಲ್ಲಿ ರಾರಾಜಿಸುತ್ತಿರುವ ತ್ರಿವರ್ಣ ಧ್ವಜಗಳು, ಒಂದೇ ಮಾತರಂ ಎಂದು ಘೋಷಣೆ ಕೂಗಿತ್ತಿರುವ ಯುವಕರು, ತೆರೆದ ವಾಹನದಲ್ಲಿ ಜನರತ್ತ ಕೈಬಿಸುತ್ತಿರುವ ವೀರಯೋಧ. ಈ ಎಲ್ಲ ದೃಶ್ಯಗಳು ಕಂಡುಬಂದಿದೆ. 40 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ವಾಪಸ್ಸಾದ ವೀರಯೋಧ ಸಿದ್ದರಾಮ ಮುನ್ನೊಳಿ ಅವರನ್ನು ಗ್ರಾಮಸ್ಥರೆಲ್ಲ ಸೇರಿ ಅದ್ದೂರಿಯಾಗಿ ಸ್ವಾಗತಿಸಿದರು. ನಗರದ ತುಂಬೆಲ್ಲ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಸಿ ದೇಶಾಭಿಮಾನ ಮೆರೆದಿದ್ದಾರೆ.
ಬಳಿಕ ನಡೆದ ಸಮಾರಂಭದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಡಾ. ಶಂಭುಲಿಂಗ ಶಿವಾಚಾರ್ಯರು, ಮಾಜಿ ಸೈನಿಕರು, ಗ್ರಾಮದ ಗಣ್ಯರು ಭಾಗವಹಿಸಿ ನಿವೃತ್ತ ಯೋಧ ಸಿದ್ದರಾಮ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ನಿಯಮ ಮೀರಿ ಪ್ಲಾಸ್ಟಿಕ್ ಬಳಸಿದರೆ ಅಂಗಡಿಗಳ ಪರವಾನಗಿ ರದ್ದು: ಸುಭಾಷ್ ಆಡಿ ಎಚ್ಚರಿಕೆ
ಮನೆಯಲ್ಲಿ ಅದೆಷ್ಟೇ ಕಷ್ಟ ಇದ್ದರೂ ಸಹ ದೇಶಸೇವೆಯೇ ಮುಖ್ಯವೆಂದು ಯೋಧ ಸಿದ್ದರಾಮ ಅವರು ಛಲ ಬಿಡದೆ 40 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ, ದೇಶದ ನಾನಾ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ, ರಾಷ್ಟ್ರಪತಿ ಪದಕವನ್ನು ಪಡೆದು ಸೈ ಎನಿಸಿಕೊಳ್ಳುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ.
ವರದಿ: ಸಿಟಿಜನ್ ಜರ್ನಲಿಸ್ಟ್ ರಾಜೇಂದ್ರ ರಾಜವಾಳ