ಕಲಬುರಗಿ | ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೆ ಡಿಎಂಎಸ್‌ಎಸ್‌ ಆಗ್ರಹ

Date:

Advertisements

ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್‌)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್‌ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ‌ಸಲ್ಲಿಸಿದರು.

ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, “ನ್ಯಾಯಮೂರ್ತಿ ಸದಾಶಿವ ಆಯೋಗದ ಆಸೆಯಂತೆ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಪರಿಶಿಷ್ಟ ಜಾತಿ ಜನಾಂಗಕ್ಕೆ ಒಳಮೀಸಲಾತಿ ನೀಡಿದರೆ ಸಮಾನತೆಗೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸಂವಿಧಾನದ ಆಶಯದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಸಾರವಾಗಿ ರಾಜ್ಯ ಸರ್ಕಾರವು ‌ಒಳಮೀಸಲಾತಿ ಜಾರಿ ಮಾಡುವುದಕ್ಕೆ ಯಾವುದೇ ತರಹದ ಕಾನೂನು ಉಲ್ಲಂಘನೆಯಾಗುವುದಿಲ್ಲವೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುತ್ತದೆ” ಎಂದು ತಿಳಿಸಿದರು.

“ಶಹಾಬಾದ್ ತಾಲೂಕಿನ ದಲಿತ ಮಾದಿಗ ಸಮನ್ವಯ ಸಮಿತಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇವೆ. ಸುಪ್ರಿಂ ಕೋರ್ಟ್‌ನ ಈ ಐತಿಹಾಸಿಕ ನಿರ್ಣಯವನ್ನು ಸ್ವಾಗತಿಸುತ್ತೇವೆ ಮತ್ತು ರಾಜ್ಯದಲ್ಲಿರುವ ಮಾದಿಗ ಸಮಾಜದ ಹೋರಾಟಗಾರರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸಬೇಕೆಂದು ಮೂರು ದಶಕಗಳ ಸತತವಾಗಿ ಹೋರಟ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಮಾದಿಗ ಸಮಾಜದ ಜನಾಂಗವಿದ್ದು, ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಯಾಗದ ಹೊರತು ಮಾದಿಗ ಸಮಾಜಕ್ಕೆ ನ್ಯಾಯ ದೊರಕಲಾರದು. ವರ್ಷಗಳಲ್ಲಿ ಸಾವು-ನೋವುಗಳಾಗಿವೆ ಮಾದಿಗ ಸಮಾಜದ ಸಹೋದರರ ರಕ್ತ ಹರಿದಿದೆ. ಹೋರಾಟವನ್ನು ನಿರಂತರವಾಗಿ ಮಾಡುತ್ತ ಬಂದಿರುತ್ತೇವೆ. ಅದರ ಪ್ರತಿಫಲವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಣಯವನ್ನು ಪ್ರಕಟಿಸುವ ಮೂಲಕ ಮಾದಿಗ ಸಮಾಜಕ್ಕೆ ನ್ಯಾಯ ನೀಡಿದೆ ಮತ್ತು ಹೋರಾಟಕ್ಕೆ ಬೆಲೆ ಬಂದಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

“ಕರ್ನಾಟಕ ರಾಜ್ಯದಲ್ಲಿರುವ ಹಲವಾರು ಇಲಾಖೆಯ ನೇಮಕಾತಿ ಹುದ್ದೆಗಳನ್ನು ಕೂಡಲೇ ತಡೆಹಿಡಿಯಬೇಕು. ಒಂದುವೇಳೆ ಒಳಮೀಸಲಾತಿ ಸುಗ್ರಿವಾಜ್ಞೆ ವಿಳಂಬವಾದಲ್ಲಿ ರಾಜ್ಯಾದ್ಯಂತ ದಲಿತ ಮಾದಿಗ ಸಮನ್ವಯ ಸಮಿತಿ ಸಂಘಟನೆ ಪರವಾಗಿ ತೀವ್ರ ಹೋರಾಟ ಮಾಡಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಡಿಎಂಎಸ್‌ಎಸ್‌ ಕಾರ್ಯಾಧ್ಯಕ್ಷ ಶರಣು ಬಿ ಪಗಲಾಪೂರ, ಜಿಲ್ಲಾ ಪ್ರತಿನಿಧಿ ರವಿ ಬೆಳಮಗಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ಟಿ ರಾಯಚೂರಕ್, ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X