ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ತನ್ನ ನಾಮಪತ್ರವನ್ನು ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಸದ ದೀಪೆಂದರ್ ಸಿಂಗ್ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದು ಜುಲಾನಾ ಕ್ಷೇತ್ರದ ಜನರು ತನಗೆ ನೀಡಿದ ಬೆಂಬಲಕ್ಕೆ ವಿನೇಶ್ ಫೋಗಟ್ ಕೃತಜ್ಞತೆ ಸಲ್ಲಿಸಿದ್ದಾರೆ.
“ನಾನು ರಾಜಕೀಯಕ್ಕೆ ಬರುತ್ತಿರುವುದು ನನ್ನ ಅದೃಷ್ಟ. ನಾವು ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಜುಲಾನಾ ಜನರು ನನಗೆ ನೀಡುತ್ತಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಗೆಲುವು ಖಚಿತ” ಎಂದು ಇತ್ತೀಚೆಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್ ಹೇಳಿದರು.
ಇದನ್ನು ಓದಿದ್ದೀರಾ? ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್ಗೆ ಸೇರಿದ ದಿನವೇ ವಿನೇಶ್ ಫೋಗಟ್ಗೆ ಟಿಕೆಟ್
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿಯ ಕುಸ್ತಿ ಪಂದ್ಯದಲ್ಲಿ ಬರೀ ನೂರು ಗ್ರಾಂ ತೂಕ ಹೆಚ್ಚಾದ ಕಾರಣ ಅನರ್ಹಗೊಂಡ ವಿನೇಶ್ ಫೋಗಟ್ ಅದಾದ ಬಳಿಕ ನಿವೃತ್ತಿಯನ್ನು ಘೋಷಿಸಿದ್ದಾರೆ. ಫೋಗಟ್ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಹರಿಯಾಣದ ಕಾಂಗ್ರೆಸ್ ಟಿಕೆಟ್ ಅವರಿಗೆ ಲಭಿಸಿದೆ.
ಇನ್ನು ವಿನೇಶ್ ಫೋಗಟ್ ವಿರುದ್ಧ ಜುಲಾನಾ ಕ್ಷೇತ್ರದಲ್ಲಿ ಬಿಜೆಪಿ ನಿವೃತ್ತ ಪೈಲಟ್ ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಕಣಕ್ಕಿಳಿಸಿದೆ. ಎಎಪಿ ಕುಸ್ತಿಪಟು ಕವಿತಾ ದಲಾಲ್ ಅವರನ್ನು ಫೋಗಟ್ ವಿರುದ್ಧ ನಿಲ್ಲಿಸಿದೆ.
VIDEO | Haryana Elections 2024: Wrestler and Congress candidate Vinesh Phogat (@Phogat_Vinesh) files her nomination from Julana assembly seat.#HaryanaAssemblyElections2024 #HaryanaElections2024
— Press Trust of India (@PTI_News) September 11, 2024
(Full video available on PTI Videos – https://t.co/n147TvqRQz) pic.twitter.com/hwpNHghnQ1
