ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಅಂಡರ್‌ಪಾಸ್‌ನಲ್ಲಿ ನಿಂತಿದ್ದ ನೀರು ಖಾಲಿ ಮಾಡಿಸಿದ ಇಂಜಿನಿಯರ್

Date:

Advertisements

ಶಿವಮೊಗ್ಗ ನಗರದ ಹೃದಯ ಭಾಗವಾದ ಅಮೀರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ತದನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿತ್ತು.

ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ ಅಂಡರ್‌ಪಾಸ್‌ ರಸ್ತೆ ಮುಚ್ಚಿರುವುದರಿಂದ ಜನಸಾಮಾನ್ಯರು ಅನಾನುಕೂಲಕ್ಕೆ ಈಡಾಗಿದ್ದರು. ಇದರಲ್ಲಿ ಕೊಳಚೆ ನೀರು, ಕಸ ಕಡ್ಡಿ ಸೇರಿಕೊಂಡು ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿ ಎದುರಾಗಿತ್ತು. ನಗರದ ಹೃದಯ ಭಾಗದಲ್ಲಿ ಈ ಸಮಸ್ಯೆ ಯಾರ ಗಮನಕ್ಕೆ ಬಂದಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿತ್ತು.

ಈ ಬಗ್ಗೆ ಕಳೆದ ಸೆಪ್ಟೆಂಬರ್ 1 ರಂದು ಈ ದಿನ.ಕಾಮ್ , “ಶಿವಮೊಗ್ಗ | ಅಂಡರ್‌ಪಾಸ್‌ ಬಳಕೆ ಸ್ಥಗಿತ; ಮಹಾನಗರ ಪಾಲಿಕೆ, ಜಿಲ್ಲಾಡಳಿತದ ನಿರ್ಲಕ್ಷ್ಯ, ಆರೋಪ” ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯ ಬಳಿಕ ಎಚ್ಚೆತ್ತುಕೊಂಡ ಶಿವಮೊಗ್ಗ ಇಂಜಿನಿಯರ್‌, ಅಂಡರ್‌ಪಾಸ್‌ನಲ್ಲಿ ನಿಂತಿದ್ದ ನೀರನ್ನು ಖಾಲಿ ಮಾಡಿಸಿದ್ದಾರೆ.

Advertisements

ಸುದ್ದಿ ಪ್ರಕಟಿಸಿದ ನಂತರ ಸ್ಪಂದಿಸಿದ ಎಲೆಕ್ಟ್ರಿಕಲ್ ಮುಖ್ಯ ಇಂಜಿನಿಯರ್ ನಾಗರಾಜ್ ಅವರು ಅಂಡರ್‌ಪಾಸ್‌ನಲ್ಲಿದ್ದ ನೀರನ್ನು ಇಂದು ಮೋಟಾರ್ ಮೂಲಕ ಆಚೆಗೆ ತೆಗಿಸಿದ್ದಾರೆ. ಇದರ ಕುರಿತು ಈ.ದಿನ.ಕಾಮ್ ಜೊತೆಗೆ ಮಾತನಾಡಿದ ಅವರು, ಇನ್ನು ಎರಡು ದಿವಸದಲ್ಲಿ ಸ್ವಚ್ಛತೆ ಮಾಡಿಸುವದಾಗಿ ತಿಳಿಸಿದ್ದಾರೆ.

ಸಾರ್ವಜನಿಕರ ಮನವಿಯಂತೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಬಳಕೆ ಹಾಗೂ ಬೀದಿ ಬದಿ ವ್ಯಾಪಾರಸ್ಥರಿಗೆ ಇದನ್ನು ಮುಕ್ತ ಅವಕಾಶ ಕಲ್ಪಿಸಿಕೊಡುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಭಾರದ್ವಾಜ್
ರಾಘವೇಂದ್ರ, ಶಿವಮೊಗ್ಗ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X