ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ಯಿ ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ. ಸಿಜೆಐ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಪ್ರಶಾಂತ್ ಭೂಷಣ್, “ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವುದು ಎರಡು ರೀತಿಯಲ್ಲಿ ಆಘಾತಕಾರಿಯಾಗಿದೆ” ಎಂದು ಹೇಳಿದ್ದಾರೆ.
“ಮೊದಲನೆಯದಾಗಿ ಕಾರ್ಯಾಂಗದಿಂದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿಯನ್ನು, ಸರ್ಕಾರವು ಸಂವಿಧಾನದ ಮಿತಿಯಲ್ಲಿ ಕಾರ್ಯನಿರ್ವಹಿಸುತ್ತದೆಯೇ ಎಂದು ನೋಡಿಕೊಳ್ಳುವ ಜವಾಬ್ದಾರಿಯನ್ನು ನ್ಯಾಯಾಂಗ ಹೊಂದಿದೆ. ಆದ್ದರಿಂದ ತಟಸ್ಥತೆಯನ್ನು ಕಾಯ್ದುಕೊಳ್ಳಬೇಕು ಎಂಬ ನಿಟ್ಟಿನಲ್ಲಿ ನ್ಯಾಯಾಧೀಶರುಗಳಿಗೆ ನೀತಿ ಸಂಹಿತೆ ವಿಧಿಸಲಾಗಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ವಿಪಕ್ಷಗಳ ಕಳವಳ
“ಈಗ ಮುಖ್ಯ ನ್ಯಾಯಮೂರ್ತಿಗಳು ಪ್ರಧಾನಿ ಮಂತ್ರಿ ಅವರನ್ನು ತಮ್ಮ ಖಾಸಗಿ ಧಾರ್ಮಿಕ ಕಾರ್ಯಕ್ರಮಕ್ಕೆ ಭಾಗಿಯಾಗಲು ಅವಕಾಶ ನೀಡಿದ್ದಾರೆ. ಮೊದಲನೆಯದಾಗಿ ನ್ಯಾಯಾಧೀಶರನ್ನು ಪ್ರಧಾನಿ ಖಾಸಗಿ ಕಾರ್ಯಕ್ರಮದಲ್ಲಿ ಭೇಟಿಯಾಗುವುದು ಸರಿಯಲ್ಲ” ಎಂದು ಅಭಿಪ್ರಾಯಿಸಿದ್ದಾರೆ.
“ಎರಡನೆಯದಾಗಿ ಪ್ರಧಾನಿ ಹಾಗೂ ಮುಖ್ಯ ನ್ಯಾಯಮೂರ್ತಿಗಳು ನಿರ್ದಿಷ್ಟವಾದ ಧಾರ್ಮಿಕ ಕಾರ್ಯವನ್ನು ಮಾಡಿ ಸಾರ್ವಜನಿಕವಾಗಿ ಹಂಚಿಕೊಳ್ಳುವುದು ಸರಿಯಲ್ಲ. ಯಾಕೆಂದರೆ ಸುಪ್ರೀಂ ಕೋರ್ಟ್ ಕೂಡಾ ಜಾತ್ಯತೀತತೆಯನ್ನು ಕಾಪಾಡಿಕೊಳ್ಳಬೇಕು. ನನ್ನ ಪ್ರಕಾರ ಇದು ಸಂಪೂರ್ಣವಾಗಿ ನ್ಯಾಯಾಧೀಶರ ನೀತಿ ಸಂಹಿತೆ ಉಲ್ಲಂಘನೆ” ಎಂದು ಹೇಳಿದ್ದಾರೆ.
My statement on the PM visiting the CJI for Ganesh puja at his residence pic.twitter.com/kcqCfNsfGz
— Prashant Bhushan (@pbhushan1) September 12, 2024
