ಮಧ್ಯಪ್ರದೇಶದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಪಕ್ಕದಲ್ಲಿದ್ದ ಹಳೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಡಾಟಿಯಾ ಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ ಡಾಟಿಯಾ ಪಟ್ಟಣದ ಖಾಲ್ಕಾಪುರ ಪ್ರದೇಶದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಒಂಬತ್ತು ಮಂದಿ ಮನೆಯ ಗೋಡೆಯ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಅವರ ಪೈಕಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಡಾಟಿಯಾ ಜಿಲ್ಲಾಧಿಕಾರಿ ಸಂದೀಪ್ ಮಕಿನ್ ಹೇಳಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರದ ನೆರವು ಘೋಷಿಸಿದ್ದಾರೆ.