ರಾಯಚೂರು | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ತಮಟೆ ಚಳವಳಿ

Date:

Advertisements

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್‌ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು ನಗರದಲ್ಲಿ ತಮಟೆ ಚಳವಳಿ ನಡೆಸಿದರು.

ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾದ ತಮಟೆ ಚಳವಳಿ ವಿವಿಧ ರಸ್ತೆಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತದ ಮುಖಾಂತರ ಮನವಿ ಸಲ್ಲಿಸಿದರು.

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು, ರಾಜ್ಯ ಸರ್ಕಾರ ಕೂಡಲೇ ಮೀಸಲಾತಿ ಹಂಚಿಕೆ ನಿರ್ಧಾರವನ್ನು ಕೈಗೊಳ್ಳಬೇಕು. ಸಂವಿಧಾನ ಆಶಯದಂತೆ ಸರ್ಕಾರ ನಡೆಯುವುದೇ ಆದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹಂಚಿಕೆ ನಿರ್ಧಾರ ಪ್ರಕಟಿಸಬೇಕೆಂದು ಒತ್ತಾಯಿಸಿದರು.

Advertisements

ದಲಿತ ಹೋರಾಟಗಾರ ಬಿ.ಕೃಷ್ಣಪ್ಪ ಇವರ ಜೂ.9 ರಂದು ಜನ್ಮ ದಿನವನ್ನು ಸರ್ಕಾರದಿಂದಲೇ ಆಚರಿಸಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು. ಬಾಕಿಯಿರುವ 3 ಲಕ್ಷ ಬ್ಯಾಕ್ ಲಾಗ್ ಹುದ್ದೆಗಳನ್ನು ನೇಮಕಾತಿ ನಡೆಸುವವರೆಗೆ ಹೊಸ ನೇಮಕಾತಿ ಪ್ರಕ್ರಿಯೆ ನಡೆಸಬಾರದು. ಬಗರ್‌ಹುಕುಂ ಸಾಗುವಳಿದಾರನ್ನು ಒಕ್ಕಲೆಬ್ಬಿಸದೇ ಸಾಗುವಳಿ ಚೀಟಿ ನೀಡಬೇಕು. ಸಮಾಜ ಕಲ್ಯಾಣ ವಸತಿ ನಿಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕೆಂದು ಇದೇ ವೇಳೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಸಂಸದಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಎಸ್.ಮಾರೆಪ್ಪ ವಕೀಲ, ಜಿಲ್ಲಾ ಸಂಚಾಲಕ ಸುರೇಶ ಬಳಗಾನೂರು, ತುರುಮಂದೆಪಪ ಕಟ್ಟಿಮನಿ, ರಾಮಣ್ಣ ಸಾಸಲಮರಿ, ಶಿವಪ್ಪ ಪಲಕನಮರಡಿ, ಶಿವರಾಜ ರುದ್ರಾಕ್ಷಿ, ಅಮರನಾಥ ಉದ್ಭಾಳ, ಈರಣ್ಣ ಕೇಳಗೆರಿ,ರಮೇಶ ಗೋಸಲೆ, ಕಾಸಿಮಪ್ಪ ಮುರಾರಿ, ಮೌನೇಶ ಕವಿತಾಳ ಸೇರಿದಂತೆ ವಿವಿಧ ತಾಲೂಕಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಪದಾಧಿಕಾರಿಗಳು ಭಾಗಿಯಾಗಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X