ಬಳ್ಳಾರಿ | ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಸಂಘಟನೆಯಿಂದ ಪ್ರತಿಭಟನೆ

Date:

Advertisements

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಎಐಡಿವೈಒ ಯುವಜನ ಸಂಘಟನೆ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನದ ಅಂಗವಾಗಿ ಬಳ್ಳಾರಿ ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು.

ಜಿಲ್ಲಾಧ್ಯಕ್ಷರಾದ ಎ.ಪಂಪಾಪತಿ ಕೋಳೂರು ಅವರು ಮಾತನಾಡಿ, ಭಾರತವನ್ನ ಯುವ ರಾಷ್ಟ್ರ  ಎಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಭಾಷಣ ಮಾಡುತ್ತಾರೆ. ಆದರೆ ಯುವಕರ ಮುಖ್ಯ ಸಮಸ್ಯೆಯಾಗಿರುವ ನಿರುದ್ಯೋಗದ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಉದ್ಯೋಗ ಕೊಡಬೇಕಾದ ಸರ್ಕಾರಗಳೇ ಉದ್ಯೋಗ ಕಡಿತಮಾಡಿ ಯುವಕರನ್ನು ನಿರುದ್ಯೋಗದ ಸುಳಿಗೆ ಸಿಲುಕಿಸುತ್ತಿವೆ ಎಂದು ಆರೋಪಿಸಿದರು.

ಯುವಕರಿಗಾಗಿ ಒಂದು ಸರಿಯಾದ ಯುವನೀತಿಯನ್ನು ರೂಪಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿವೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇವೆ. ಅವನ್ನು ತುಂಬಿಸಿಕೊಳ್ಳುವುದನ್ನು ಬಿಟ್ಟು ಇರುವ ಹುದ್ದೆಗಳನ್ನು ನಾಶಮಾಡುವ ನಿಟ್ಟಿನಲ್ಲಿ ಸರ್ಕಾರಗಳು ಕೆಲಸ ಮಾಡುತ್ತಿವೆ. ಕಳೆದ ವರ್ಷ ಸುಮಾರು 90 ಸಾವಿರ ಹುದ್ದೆಗಳನ್ನು ನಾಶ ಮಾಡುವ ಮೂಲಕ ಕೇಂದ್ರ ಸರ್ಕಾರ ಯುವಕರಿಗೆ ದ್ರೋಹ ಬಗೆದಿದೆ ಎಂದರು.

Advertisements

ಜಿಲ್ಲಾ ಕಾರ್ಯದರ್ಶಿ ಜಗದೀಶ್ ನೇಮಕಲ್ ಮಾತನಾಡಿ, ಇಂದು ಯುವಜನರು ಉದ್ಯೋಗಕ್ಕಾಗಿ ಬಕಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ, ನಮ್ಮ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿ ಯುವಕರನ್ನು ಹತಾಶರನ್ನಾಗಿಸುತ್ತಿವೆ. ಹಗರಣಗಳ ಮೇಲೆ ಹಗರಣಗಳನ್ನು ಮಾಡುತ್ತಿವೆ ಮತ್ತು ಅವು ಯಾವುದೇ ರೀತಿಯಾಗಿ ತನಿಖೆಗಳು ಆಗದೇ ನೆನೆಗುದಿಗೆ ಬಿದ್ದಿವೆ ಎಂದರು.

ಎಷ್ಟೋ ಜನ ಯುವಕರು ಉದ್ಯೋಗಕ್ಕಾಗಿ ಅಲೆದು ಅಲೆದು ಹತಾಶರಾಗಿ ಆತ್ಮಹತ್ಯೆ ಮತ್ತು ಸಮಾಜಘಾತುಕ ಕೆಲಸಗಳ ದಾರಿ ಹಿಡಿಯುತ್ತಿದ್ದಾರೆ. ಈ ಹಿಂದೆ ಬಾಲಶೋರ್‌ನಲ್ಲಿ ನಡೆದ ರೈಲು ಅಪಘಾತ ಈ ಶತಮಾನದಲ್ಲೇ ಅತಿ ದೊಡ್ಡ ಅಪಘಾತ ಎಂದು ಹೇಳಲಾಗುತ್ತಿದೆ. ಏಕೆಂದರೆ ಅಲ್ಲಿ ರೈಲ್ವೆ ನಿರ್ವಹಣೆಗೆ ಬೇಕಾದಷ್ಟು ಉದ್ಯೋಗ ಭರ್ತಿ ಇಲ್ಲದಿರುವುದು ಈ  ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಇಷ್ಟಾದರೂ, ಕೇಂದ್ರ ಸರ್ಕಾರ ಉದ್ಯೋಗಗಳನ್ನು ಭರ್ತಿ ಮಾಡುವುದುನ್ನು ಬಿಟ್ಟು ಖಾಸಗೀಕರಣದ ಹೆಸರಿನಲ್ಲಿ ಉದ್ಯೋಗ ಕಡಿತ ಮಾಡುತ್ತಿದೆ. ಇದರ ವಿರುದ್ಧ ದೇಶದ ಯುವಕರು ಒಂದಾಗಿ ಹೋರಾಡಬೇಕಿದೆ ಎಂದರು.

ಇದನ್ನು ಓದಿದ್ದೀರಾ? ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

ರೈಲ್ವೆ ಖಾಸಗೀಕರಣ ಬೇಡ, ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಿ, ಕಾಯ್ದಿರಿಸಿದ (ಯು ಆರ್) ಕೋಚ್ ಮತ್ತು ಸ್ಲೀಪರ್ ( ಎಸ್ ಎಲ್) ಗಳನ್ನು ಹೆಚ್ಚಿಸಬೇಕು, ಹಿರಿಯ ನಾಗರಿಕರಿಗೆ ರಿಯಾಯಿತಿ ಮರುಸ್ಥಾಪಿಸಬೇಕು, ಲಸೆ ಕಾರ್ಮಿಕರಿಗೆ ಸಂಪೂರ್ಣ ಕಾಯ್ದಿರಿಸಿದ (ಯು ಆರ್ ) ಕೋಚ್‌ಗಳ ರೈಲುಗಳನ್ನು ಓಡಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲಾಯಿತು. ಕೇಂದ್ರ ರೈಲ್ವೆ ಸಚಿವರಿಗೆ ಬಳ್ಳಾರಿ ಸ್ಟೇಷನ್ ಮಾಸ್ಟರ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ಪ್ರತಿಭಟನೆಯಲ್ಲಿ ವೀರಮಲ್ಲ, ನಿತಿನ್, ನಾಗರಾಜ್, ಆಕಾಶ್, ದರ್ಶನ್ ಮತ್ತು ಇನ್ನಿತರ ವಿದ್ಯಾರ್ಥಿ ಯುವಜನರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X