ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜಗೆ ತೆರಳಲು ಬಸ್ ಇಲ್ಲದೆ ಪರದಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಕವಲೂರು ಗ್ರಾಮದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬನ್ನಿಕೊಪ್ಪ ಗ್ರಾಮಕ್ಕೆ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ರಸ್ತೆ ಸರಿ ಇಲ್ಲದ್ದ ಕಾರಣಕ್ಕೆ ಇಂದು ಬಸ್ ಬಾರದೆ ಕಾರಣಕ್ಕೆ ಹಲವು ವಿದ್ಯಾರ್ಥಿಗಳು ಪರದಾಡಬೇಕಾದ ಸ್ಥಿತಿ ಉಂಟಾಯಿತು.
ಕವಲೂರು ಗ್ರಾಮಕ್ಕೆ ಬಸ್ ದಿನನಿತ್ಯ ಓಡಾಡುತ್ತಿತ್ತು. ರಸ್ತೆ ಪೂರ್ತಿ ಹದೆಗೆಟ್ಟಿದ್ದು, ಗುಂಡಿಗಳಿಂದ ತುಂಬಿ ಹೋಗಿದೆ. ಈ ಕಾರಣಕ್ಕೆ ಬಸ್‌ಗಳು ಕೆಟ್ಟು ಹೋಗುತ್ತಿವೆ ಹಾಗೂ ಅಪಘಾತಗಳು ಆಗುವ ಸಂಭವವಿರುತ್ತದೆ ಎಂದು ಸಾರಿಗೆ ಡಿಪೋ ಅಧಿಕಾರಿಗಳು ಬಸ್ ಬಿಡುವುದಕ್ಕೆ ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.
ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರಸ್ತೆ ದುರಸ್ತಿ ಕಂಡಿಲ್ಲ. ಹದಗೆಟ್ಟ ರಸ್ತೆಯನ್ನು ಸರಿಪಡಿಸದೆ ಇರುವುದರಿಂದ ಬಸ್ ಗ್ರಾಮಕ್ಕೆ ಬಿಡಲು ಸಾರಿಗೆ ಅಧಿಕಾರಿಗಳು ಆತಂಕಗೊಂಡಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಸಂಬಂಧಪಟ್ಟವರು ಚೆಲ್ಲಾಟವಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ಸಾವು
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗ್ರಾಮದ ರಸ್ತೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಮಸ್ಯೆಯನ್ನು ಬಗೆಹರಿಸಿ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್ ಸಂಚಾರ ಸುಗಮಗೊಳಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
