ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಆದರೆ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತನಿಖೆಯ ಉದ್ದೇಶದಿಂದ ಬಂಧನ ಮಾಡುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಕೋರ್ಟ್ ಹೇಳಿದೆ.
ಹಾಗೆಯೇ ಈ ಪ್ರಕರಣದ ಬಗ್ಗೆ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಮತ್ತು ವಿಚಾರಣಾ ನ್ಯಾಯಾಲಯದ ಮುಂದೆ ಎಲ್ಲಾ ವಿಚಾರಣೆಗಳಿಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿರುವಾಗ ಅವರನ್ನು ಜೈಲಿನಲ್ಲಿಡುವುದು ನ್ಯಾಯದ ಅಪಹಾಸ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿದೆ.
ಇದನ್ನು ಓದಿದ್ದೀರಾ? ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಹಾಗೆಯೇ ಇಡಿ ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ವಿಫಲಗೊಳಿಸಲೆಂದೇ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
“ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧನ ಮಾಡಿರುವುದು ಉತ್ತರಕ್ಕಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಮಾರ್ಚ್ 2023ರಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದರೂ ಅವರನ್ನು ಬಂಧಿಸುವ ಅಗತ್ಯವಿದೆ ಎಂದು ಸಿಬಿಐಗೆ ಅನಿಸಿಲ್ಲ. ಇಡಿ ಬಂಧನದಿಂದ ಜಾಮೀನು ದೊರೆತ ಬಳಿಕವೇ ಸಿಬಿಐ ಬಂಧನ ಮಾಡಿದೆ. ಈ ಬಂಧನದ ಸಮಯ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧನ ಮಾಡಿದೆ.
Justice Surya Kant: regarding whether chargesheet filing is a material development in circumstance.. it is … but we are not relegating the appellant to the trial court. WE DIRECT ARVIND KEJRIWAL TO BE RELEASED on bail subject to bail bonds of 10 lakhs. #SupremeCourtOfIndia… pic.twitter.com/fyLqPYFMre
— Bar and Bench (@barandbench) September 13, 2024
