ಹೆಂಡತಿ ಬಗ್ಗೆ ಅಶ್ಲೀಲ ಮಾತು, ಶಾಸಕ ಮುನಿರತ್ನನಿಂದ ಜೀವ ಬೆದರಿಕೆ: ಗುತ್ತಿಗೆದಾರ ಚೆಲುವರಾಜು ಆರೋಪ

Date:

Advertisements

ಬಿಜೆಪಿ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್ ಕುಮಾರ್ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿ ರೀತಿಯಲ್ಲೇ ನಿನ್ನ ಕೊಲೆ ಮಾಡುತ್ತೇವೆ ಎಂದು ಹೆದರಿಸಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಗಂಭೀರವಾಗಿ ಆರೋಪಿಸಿದ್ದಾರೆ.

ಹಣ ವಸೂಲಿ ಮಾಡಲು ಜಾತಿ ನಿಂದನೆ ಮಾಡಿ, ಹೆಂಡತಿ ಮತ್ತು ತಾಯಿ ಬಗ್ಗೆ ಅತ್ಯಂತ ಅಶ್ಲೀಲ ಭಾಷೆಯಲ್ಲಿ ನಿಂದಿಸಿ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಅರೋಪಿಸಿ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿ ಚೆಲುವರಾಜು ಮಾತನಾಡಿದರು.

“ಮುಂದೆ ನಾನು‌ ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಜಾತಿ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಹೆಂಡತಿ ಫೋಟೋ ತೋರಿಸು ಹೇಗಿದ್ದಾಳೆ ಎನ್ನುತ್ತಾರೆ. ಮನಿರತ್ನ ನನ್ನ ಹೆಂಡತಿಯನ್ನು ಮಂಚಕ್ಕೆ ಕಳುಹಿಸು ಎಂದಿದ್ದಾರೆ. ನನ್ನ ತಾಯಿಯ ಬಗ್ಗೆ ಅಸಹ್ಯವಾಗಿ ಮಾತಾಡಿದ್ದಾರೆ” ಎಂದು ಆರೋಪಿಸಿದರು.

Advertisements

“ನಾನು ಪೌರ ಕಾರ್ಮಿಕನಾಗಿ, ಲಾರಿ ಕ್ಲೀನರ್,‌ ಡ್ರೈವರ್ ಆಗಿ ಕೆಲಸ ಮಾಡಿ, ಈಗ ವಾರ್ಡ್ ಗುತ್ತಿಗೆದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಶಾಸಕ ಮುನಿರತ್ನ ಮತ್ತು ಪಿಎ ವಿ ಜಿ ಕುಮಾರ್ ಫೋನ್ ಮಾಡಿ, ನನಗೆ ತಿಳಿಯದೇ ಆರ್ಡರ್‌ ಮಾಡಿಸ್ತೀಯಾ ಎಂದು ಆವಾಜ್ ಹಾಕುತ್ತಾರೆ. ಸಭೆ ಕರೆದು ಎಲ್ಲರೆದುರು ನನ್ನ ಬೈದಿದ್ದಾರೆ. 36 ಲಕ್ಷ ಕೊಡು ಎಂದರು. ನಾನು 15 ಲಕ್ಷ ಕೊಡುವೆ ಎಂದೆ. ಆದರೆ ನನಗೆ ಅಷ್ಟು ಹಣ ಕೊಡಲಾಗಲಿಲ್ಲ” ಎಂದರು.

“ಮೂರು ದಿನದ ಮುಂದೆ ಮುನಿರತ್ನ ಆಪ್ತ ವಸಂತಕುಮಾರ್ ಸಿಕ್ಕಿದ್ದರು. ನೀನು ಹಣ ಕೊಟ್ಟಿಲ್ಲ ಅಂದ್ರೆ ರೇಣುಕಾಸ್ವಾಮಿ ತರ ನಿನಗೂ ಆಗುತ್ತೆ ಅಂದರು. ಅದಕ್ಕೆ ನನಗೆ ಭಯ ಆಗಿದೆ. ಮುನಿರತ್ನ ನನ್ನನ್ನು ಏನಾದ್ರೂ ಮಾಡುವಷ್ಟು ಪ್ರಭಾವಿ. ನನ್ನ ಜೀವಕ್ಕೆ ಅಪಾಯವಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್‌ ಹಾಗೂ ಪೊಲೀಸ್ ಕಮಿಷನರ್‌ ಅವರನ್ನು ಭೇಟಿ ಆಗಿ ದೂರು ಕೊಡುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X