ಉಡುಪಿ | ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಸುಗುಣೇಂದ್ರ ಸ್ವಾಮೀಜಿ

Date:

Advertisements

ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ಸ್ವಾಮೀಜಿ ಹಾರೈಸಿದರು.

ಅವರು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಶುಭ ಹಾರೈಸಿದ ಶ್ರೀಪಾದರು, ಬಹುಮಾನ ಗಳಿಕೆಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವ ಮಕ್ಕಳಲ್ಲಿರಬೇಕು ಎಂದರು.

Advertisements

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಬಹು ಭಾಷೆ, ಬಹು ಕಲೆ – ಸಂಸ್ಕೃತಿಯ ಈ ಕರಾವಳಿ ಭಾಗದಲ್ಲಿ ಮುಂದಿನ ತಿಂಗಳು ಮಂಗಳೂರಿನಲ್ಲಿ ನಡೆಯುವ ಬಹು ಸಂಸ್ಕೃತಿ ಉತ್ಸವಕ್ಕೆ ಪೂರಕವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸ್ಪರ್ಧೆಗಳನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಚಿಕ್ಕನಿಂದಲೇ ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುದರ ಮೂಲಕ ನಮ್ಮ ರಾಷ್ಟ್ರೀಯ ಹಬ್ಬಗಳು, ಆಚಾರ- ವಿಚಾರ, ಸಂಸ್ಕೃತಿಯನ್ನು ಮೈಗೊಡಿಸಿಕೊಂಡು ದೇಶದ ಸುಸಂಸ್ಕೃತ ಪ್ರಜೆಯಾಗಿ ಬದುಕು ಕಟ್ಟಿಕೊಳ್ಳಬೇಕು” ಎಂದು ತಿಳಿಸಿದರು.

ಜಿಲ್ಲಾಮಟ್ಟದ ಈ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 3,000 ರೂ., ದ್ವಿತೀಯ ಬಹುಮಾನ 2,000 ರೂ., ತೃತೀಯ ಬಹುಮಾನ 1,000 ರೂ. ನಗದು ಹಾಗೂ 5 ಸಮಾಧಾನಕರ ಬಹುಮಾನಗಳು ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪ್ರಮಾಣ ಪತ್ರವನ್ನು ಮಂಗಳೂರು ವಲಯ ಮಟ್ಟದ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂ ಇವರಿಂದ ಸ್ಪರ್ಧೆ ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್, ಆರ್ಟಿಸ್ಟ್ ಫೋರಂ ಉಡುಪಿ ಕಾರ್ಯದರ್ಶಿ ಸಕು ಪಾಂಗಾಳ, ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಚಿಂತಾಮಣಿ | ಸೆ.16, 17ರಂದು ಮುರುಗಮಲ್ಲ ದರ್ಗಾ ಉರೂಸ್‌ ಹಬ್ಬ; ಆರೋಗ್ಯಾಧಿಕಾರಿಯಾಗಿ ಡಾ.ಸೂಫಿಯನ್ ನೇಮಕ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶ್ರೀ ಕೃಷ್ಣಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X