ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಮುಖಂಡ ರಾಜು ನಾಯಕ ಗಂಗಾವತಿ ಆಗ್ರಹಿಸಿದ್ದಾರೆ.
ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ʼಭಾರತದಲ್ಲಿ ಸಮಾನತೆ ವಾತಾವರಣ ಬಂದ ಬಳಿಕ ಮೀಸಲಾತಿ ತೆಗೆದು ಹಾಕುವ ಬಗ್ಗೆ ಕಾಂಗ್ರೆಸ್ ಪಕ್ಷ ಆಲೋಚಿಸಲಿದೆʼ ಎಂದು ಹೇಳಿದ್ದರು. ಈಗ ಸಮಾನತೆಯ ಪರಿಸ್ಥಿತಿ ಇಲ್ಲ ಎಂದೂ ಅವರು ಹೇಳಿದ್ದರುʼ ಎಂದಿದ್ದಾರೆ.
ʼವಿದೇಶಿ ನೆಲದಲ್ಲಿ ನಿಂತು ದೇಶದ ವಿರೋಧ ಪಕ್ಷದ ನಾಯಕ ದೇಶಕ್ಕೆ ಕಳಂಕ ತರುವ ರೀತಿ ಮಾತನಾಡಿದ್ದು ಶೋಭೆಯಲ್ಲ. ದೇಶದ ಕುರಿತು ಅಸಂಬದ್ಧ ಹೇಳಿಕೆ ನೀಡಿ ಚೀನಾ ದೇಶವನ್ನು ಹೊಗಳುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಇದೊಂದು ಅಕ್ಷಮ್ಯ ಅಪರಾಧʼ ಎಂದು ದೂರಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುಲ್ಡೋಜರ್, ತಲವಾರು ಹೇಳಿಕೆ; ಬಿಜೆಪಿ ಮುಖಂಡರಿಗೆ ಸೌಹಾರ್ದ ಕರ್ನಾಟಕ ಬೇಕಿಲ್ಲವೇ?!
ಡಾ.ಬಿ.ಆರ್.ಅಂಬೇಡ್ಕರ್ ಅವರ ನೀಡಿದ ಸಂವಿಧಾನಬದ್ಧ ಮೀಸಲಾತಿಯನ್ನು ರದ್ದು ಮಾಡುತ್ತೇನೆಂದು ಹೇಳಿರುವುದು ಸಂವಿಧಾನಕ್ಕೆ ಮಾಡಿರುವ ಅಪಮಾನ. ಕೂಡಲೇ ರಾಹುಲ್ ಗಾಂಧಿ ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕುʼ ಎಂದು ಒತ್ತಾಯಿಸಿದರು.
